ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್‌ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು.
ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 8 ಠಾಣೆಗಳ ಸುಮಾರು 52 ರೌಡಿ ಶೀಟರ್ ಗಳ ಮಾಹಿತಿ ಪಡೆದ ಅವರು, ದುಷ್ಟ ವರ್ತನೆಯನ್ನು ಬದಲಾಯಿಸಿಕೊಂಡು ಸೌಜನ್ಯತೆಯಿಂದ ಸಮಾಜದಲ್ಲಿ ನೀವೂ ಬದುಕಿ ಇತರರು ಬದುಕಲು ಅನುವು ಮಾಡಿಕೊಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ. ಇಲ್ಲವಾದಲ್ಲಿ ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕಾನೂನಿಗೆ ಗೌರವ, ಮಾನವೀಯತೆ, ನೈತಿಕ, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಕೊಡುವಂತ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು ಯಾರೇ ತಪ್ಪು ಮಾಡಿದರು ಕಾನೂನಿನ ಶಿಕ್ಷೆಗೆ ಒಳಗಾಗಲೇಬೇಕು. ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಈ ನಿಟ್ಟಿನಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿಗೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ತಮ್ಮ ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರತೀ ರೌಡಿಗಳ ಮಾಹಿತಿಯನ್ನು ಪಡೆದುಕೊಂಡು ನಿಗಾವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಎಂ.ಆರ್. ಹರೀಶ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ವಿವಿಧ ಠಾಣೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…