ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದರು.
ಕನ್ನಡ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಅವರ 50ನೇ ಜನ್ಮದಿನದ ಅಂಗವಾಗಿ ಪಕ್ಷದ ಮುಖಂಡರು ಹಾಗೂ ಅಭಿಮಾನಿ ಬಳಗದ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ಮತ್ತು ಆಹಾರ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಜೀವ್ ನಾಯಕ್, ನಾವೆಲ್ಲರೂ ದಿವಂಗತ ಡಾ. ವೆಂಕಟರೆಡ್ಡಿ ಅವರ ಅನುಯಾಯಿಗಳಾಗಿದ್ದು, ಅವರಂತೆ ಸರಳ ಜೀವನವನ್ನು ಅಳವಡಿಸಿಕೊಂಡಿದ್ದೇವೆ. ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ವೆಂಕಟೇಶ್ ಅವರ 50ನೇ ಜನ್ಮದಿನವನ್ನು ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುವ ಮೂಲಕ ಸಮಾಜಕ್ಕೆ ಸೇವೆಯ ಸಂದೇಶ ನೀಡುತ್ತಿದ್ದೇವೆ ಎಂದರು.
ವೆಂಕಟೇಶ್ ಅವರು ಪಕ್ಷದಲ್ಲಿ ಸತತ 25 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದು, ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಮಾಜಸೇವೆಯ ಮೂಲಕ ಆಚರಿಸುತ್ತಿರುವುದು ಸಂತಸದ ಸಂಗತಿ. ಕನ್ನಡ ಪಕ್ಷದ ಸಿದ್ಧಾಂತ ಮತ್ತು ನಿಲುವುಗಳನ್ನು ಇಂದಿನ ಜೆನ್-ಜಿ ಯುವಪೀಳಿಗೆಗೆ ತಲುಪಿಸಬೇಕಿದೆ. ನೆಲ, ಜಲ ಮತ್ತು ಭಾಷೆಯ ಸಂರಕ್ಷಣೆಗಾಗಿ ಪಕ್ಷದ ಹೋರಾಟ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂದು ತಿಳಿಸಿದರು.
ಕನ್ನಡ ಪಕ್ಷದ ರಾಜ್ಯ ಕಾರ್ಯದರ್ಶಿ ಡಿ.ಪಿ. ಆಂಜನೇಯ ಮಾತನಾಡಿ, ನಮ್ಮ ಪಕ್ಷದಲ್ಲಿ ಅದ್ದೂರಿ ಆಚರಣೆಗಳಿಗೆ ಅವಕಾಶವಿಲ್ಲ. ಬಡ ರೋಗಿಗಳಿಗೆ ಹಣ್ಣುಹಂಪಲು ಹಾಗೂ ಆಹಾರ ವಿತರಿಸುವ ಮೂಲಕ ನಾಯಕರ ಜನ್ಮದಿನವನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದ್ದು, ಸಮಾಜಕ್ಕೆ ಮಾದರಿಯಾಗಿದೆ” ಎಂದರು.
ತಾಲ್ಲೂಕು ಅಧ್ಯಕ್ಷ ವೆಂಕಟೇಶ್ ಮಾತನಾಡಿ, “ನಾನು ಈವರೆಗೆ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳು, ಹಿತೈಷಿಗಳು ಹಾಗೂ ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಈ ಬಾರಿ ಆಚರಿಸಲಾಗುತ್ತಿದೆ. ಬಡಜನರ ಸೇವೆಯ ಮೂಲಕ ಹುಟ್ಟುಹಬ್ಬ ಆಚರಿಸುತ್ತಿರುವುದು ನನಗೆ ಹೆಚ್ಚಿನ ಸಂತೋಷ ತಂದಿದೆ” ಎಂದರು.
ಬೆಳಿಗ್ಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾರ್ಗದರ್ಶಕರಾಗಿದ್ದ ದಿವಂಗತ ವೆಂಕಟರೆಡ್ಡಿ ಅವರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಲಾಯಿತು. ಬಳಿಕ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಆಹಾರ ಮತ್ತು ಹಣ್ಣುಹಂಪಲು ವಿತರಿಸಲಾಯಿತು. ಮಧ್ಯಾಹ್ನ ನಗರದ ತೇರಿನ ಬೀದಿಯಲ್ಲಿ ಅನ್ನದಾಸೋಹ ಆಯೋಜಿಸಲಾಗಿತ್ತು. ವಿವಿಧ ಸಮಾಜಸೇವಾ ಕಾರ್ಯಗಳ ಮೂಲಕ ಜನ್ಮದಿನ ಆಚರಿಸುತ್ತಿರುವುದು ಮನಸ್ಸಿಗೆ ನೆಮ್ಮದಿ ತಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಪಕ್ಷದ ಮುಖಂಡರಾದ ನರಸಿಂಹಮೂರ್ತಿ, ಆರ್. ರಂಗನಾಥ್, ಡಿ. ವೆಂಕಟೇಶ್, ಎಂ.ಜಿ. ಬೋರೇಗೌಡ, ವಿ. ಪರಮೇಶ್, ಜಿ. ಸುರೇಶ್, ಕೆ.ಎನ್. ಕುಮಾರ್, ಮಂಜುನಾಥ್, ಶ್ರೀನಿವಾಸ್, ರಾಜಣ್ಣ, ರಾಮಚಂದ್ರ, ಮಹೇಶ್, ಬಾಬಾ ನಾಗರಾಜು, ಜೀವನ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…