Categories: ಕೋಲಾರ

ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನ ನೀಡಿದ ಕೊಡುಗೆ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ ಆದರೆ ಎಲ್ಲಾ ಧರ್ಮಗಳಿಗೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆಗುರುತುಗಳನ್ನು ಅರಿತುಕೊಂಡು ಅವರ ಮಾರ್ಗದರ್ಶನದಲ್ಲಿ ನಾವು ಎಲ್ಲರೂ ನಡೆಯಬೇಕಾಗಿದೆ ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ ಇವತ್ತು ಶಾಂತಿ ಸುಗುಮವಾಗಿ ಭಾರತವು ಮುನ್ನೆಡೆಯುತ್ತಿದೆ ಎಂದರೆ ಅದಕ್ಕೆ ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಶ್ರೇಷ್ಠವಾಗಿದೆ ಅಭಿವೃದ್ಧಿಗೆ ಒಗ್ಗಟ್ಟು ಮತ್ತು ಸಾಮರಸ್ಯದಿಂದ ಹೋಗಬೇಕು ಎಂದರು.

ಭಾರತ ದೇಶದಲ್ಲಿ ಸಂವಿಧಾನ ಮೀಸಲಾತಿಯು ಇಲ್ಲದ ಸಂದರ್ಭದಲ್ಲಿ ಯಾರು ಓದದೇ ಇರುವಷ್ಟು ಪದವಿಗಳನ್ನು ಅಂಬೇಡ್ಕರ್ ಪಡೆದಿದ್ದಾರೆ. ಆದರೆ ಇವತ್ತು ಮೀಸಲಾತಿಯಲ್ಲಿ ಎಲ್ಲಾ ಅವಕಾಶಗಳು ಇದ್ದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ ಮೀಸಲಾತಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಸಮಾಜದಲ್ಲಿನ ಬಡವರಿಗೆ ಮೀಸಲಾತಿ ನೀಡಲಾಗುತ್ತಿದ್ದು ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡು ಸಮಾಜಕ್ಕೆ ಒಳ್ಳೆಯ ರೀತಿಯಲ್ಲಿ ತಾವುಗಳು ಕಾಣಿಕೆ ನೀಡಬೇಕಾಗಿದೆ ಎಂದರು

ಈ ಸಂದರ್ಭದಲ್ಲಿ ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್ ಎಲ್ಲಿ ಭ್ರಷ್ಟಾಚಾರ, ಸಮಾನತೆ, ಅನ್ಯಾಯ ಕೂಡಿದೆ ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅವಶ್ಯಕತೆ ಹೆಚ್ಚಾಗಬೇಕು ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳ ವಿಂಗಡನೆಗೆ ಸಹ ಮಾರ್ಗದರ್ಶನ ನೀಡಿದ್ದಾರೆ ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆಯನ್ನು ನೀಡಬೇಕು ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

7 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

12 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

18 hours ago