ಸರಕಾರಿ ಆಸ್ಪತ್ರೆಯಲ್ಲಿಲ್ಲ ಕುಡಿಯುವ ನೀರಿನ ವ್ಯವಸ್ಥೆ; ಪ್ರತಿನಿತ್ಯ ನೀರಿಲ್ಲದೆ ರೋಗಿಗಳ ಪರದಾಟ; ಸಾರ್ವಜನಿಕ ಆಸ್ಪತ್ರೆಗೆ ಬೇಕಿದೆ ಶುದ್ಧ ಕುಡಿಯುವ ನೀರಿನ ಘಟಕ

ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.

100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.

ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್‌ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.

ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್‌ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್‌ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್‌ನ ದುಪಟ್ಟು ಹಣ ತೆತ್ತಬೇಕಾಗಿದೆ.

ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.

ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್‌ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 hour ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

11 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

24 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago