ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…