ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಸಮುದಾಯಗಳಿಗೆ ಸೇರಿದವರಾಗಿರಬೇಕು. ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು.
ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000/-ಗಳನ್ನು ನೀಡುವುದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ತಿಂಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ…
ಚಲಿಸುತ್ತಿದ್ದ ರೈಲಿಗೆ ನಿವೃತ್ತ ಎಎಸ್ಐ ಪೊಲೀಸ್ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಜಂಕ್ಷನ್ ಬಳಿ ನಡೆದಿದೆ. ಲವಕುಶ…
ರಾಜ್ಯದ, ಸಮಾಜದ, ಪ್ರಜಾಪ್ರಭುತ್ವದ, ಮಾನವೀಯ ಮೌಲ್ಯಗಳ, ನೈತಿಕ ತತ್ತ್ವಗಳ, ನಾಗರಿಕ ಪ್ರಜ್ಞೆಯ ಘನತೆಯನ್ನು ರಕ್ಷಿಸಲು ಕಳಕಳಿಯ ಮನವಿ. ನಮ್ಮ ಮಕ್ಕಳ…
ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ…
ಕಾಡು ಉಳಿಸಿ....... ನಾಡು ಉಳಿಸಿ....... ಈ ತಕ್ಷಣಕ್ಕೆ ಯಾವುದು ಹೆಚ್ಚು ಮಹತ್ವದ್ದು ಮತ್ತು ತೀರಾ ಅನಿವಾರ್ಯವಾದದ್ದು....... ಇತ್ತೀಚೆಗೆ ಶಾಂತಿಗಾಗಿ ನೊಬೆಲ್…