ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ: ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು-ರೈತ ಮುಖಂಡ ಅಂಬರೀಶ್

ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ‌ ನಡೆಸಲಾಗುತ್ತಿದೆ.

ಈ ಹೋರಾಟಕ್ಕೆ ನಾನು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಹಳ್ಳಿ ರೈತ ಅಂಬರೀಶ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹಳ್ಳಿ ರೈತ ಅಂಬರೀಶ್ ಅವರು, ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಾಳೆ ನಡೆಸಲಾಗುತ್ತಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಖಾಸಗಿ ವಲಯದಲ್ಲೂ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ.‌‌ ಇದರಿಂದ ಕನ್ನಡಿಗರಿಗೆ ಕರ್ನಾಟಕದಲ್ಲಿ ಆಗುತ್ತಿರುವಂತ ಅನ್ಯಾಯ ತಪ್ಪಬೇಕು. ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *