ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.
ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.
ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…