Categories: ರಾಜ್ಯ

ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ: ಜೆಡಿಎಸ್ ಸದಸ್ಯರ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು: ಇದೊಂದು ಕರಾಳ ದಿನ: ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದೆ: ಬಸವರಾಜ ಬೊಮ್ಮಾಯಿ‌ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ ಜೆಡಿಎಸ್ ಸದಸ್ಯರೊಂದಿಗೆ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 17, 18ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೊಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೊ ಅವರಿಗೆ ಗೌರವ ಸಲ್ಲಿಸಲು ಪ್ರೊಟೊಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೆಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗಿದೆ. ಸ್ಫೀಕರ್‌ ಸ್ಥಾನ ದುರುಪಯೋಗ ಆಗಿದೆ. ಸ್ಫೀಕರ್‌ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದ್ದಾರೆ. ಸ್ಫೀಕರ್‌ ಕಾಂಗ್ರೆಸ್ ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಫೀಕರ್‌ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೊಗಿರುವುದು ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ಕರಾಳ ದಿನ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರಿಗೆ ಅವಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

*ರಾಜ್ಯದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್:*

ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು ಇದೇ ಮೊದಲ ಬಾರಿಯಲ್ಲ. ಸಾಕಷ್ಟು ಬಾರಿ ಸಮಾವೇಶಗಳು ನಡೆದಿವೆ. ಈ ಸಭೆಗೆ ಬಂದವರು ಅನೇಕರು ಎಂಎಲ್ ಎ, ಎಂಪಿ ಅಲ್ಲಾ, ಪ್ರಧಾನ‌ ಕಾರ್ಯದರ್ಶಿಗಳು ಏರ್ ಪೊರ್ಟ್ ಬಳಿ ನಿಂತು ಅವರನ್ನು ಸ್ವಾಗತ ಮಾಡಿದ್ದಾರೆ‌ ಎಂದು ಆರೋಪಿಸಿದರು.

ನೀವು ಅಧಿಕಾರದಲ್ಲಿರುವವರಿಗೆ ನಿಯಮದ ಪ್ರಕಾರ ಗೌರವ ಕೊಡಿ, ಪುಡಿ ಪಾರ್ಟಿಗಳ ಮುಖಂಡರು‌ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರಿಗೆ ಅವರ ರಾಜ್ಯದಲ್ಲಿಯೇ ಮರ್ಯಾದೆ ಇಲ್ಲ. ಜೊಶೆಪ್ ಕರ್ನಾಟಕ ಲೆಜಿಸ್ಲೆಟಿವ್ ಅಂತ ಹಾಕಿದ್ದಾರೆ. ಅವರು ರಾಜ್ಯದ ಶಾಸಕರೆ, ಇವರು ಕರ್ನಾಟಕದ ಮಾನವನ್ನು ರಾಜಕೀಯ ಲಾಭಕ್ಕೆ ಹರಾಜು ಹಾಕುತ್ತಿದ್ದಾರೆ.

ಅಧಿಕಾರಿಗಳು ಯಾಕೆ ಅಲ್ಲಿ ಅಟೆಂಡ್ ಆಗಿದ್ದಾರೆ ಅವರಿಗೆ ನೊಟಿಸ್ ಕೊಡಬೇಕು ಎರಡು ದಿನದ ಸಂಬಳ ಕಡಿತ ಮಾಡಬೇಕು. ಸಿಎಸ್ ಅವರು ಏನು ಮಾಡುತ್ತಿದ್ದರು. ಅವರು ಅನುಮತಿ ನೀಡಿದ್ದಾರಾ ಎಂದು ಪ್ರಶ್ನಿಸಿದರು.
ಇಲ್ಲಿ ಬರಗಾಲ ಬಿದ್ದು ಸಾಕಷ್ಟು ಕೆಲಸಗಳಿವೆ ಸರ್ಕಾರದ ಕೆಲಸ ಬಿಟ್ಟು ಅಧಿಕಾರಿಗಳು ಅಲ್ಲಿಗೆ ಹೊಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಸರ್ಕಾರ ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿದೆ. ಇದು ಜನರ ತೆರಿಗೆ ಹಣ ನಿಮ್ಮ ಹಣವಲ್ಲ. ರಾಜ್ಯ ಸರ್ಕಾರ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

4 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

9 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago