ಸರ್ಕಾರದ ನೀತಿಗಳ ವಿರುದ್ಧ ನಾಳೆ ಜೆಡಿಎಸ್ ಬೃಹತ್ ಪ್ರತಿಭಟನೆ: ಬಸ್ ಪ್ರಯಾಣ ದರ ಏರಿಕೆ, ವಿದ್ಯುತ್ ಸಮಸ್ಯೆ, ರೈತರ ನಿರ್ಲಕ್ಷ್ಯ ಖಂಡಿಸಿ ಹೋರಾಟ- ಹರೀಶ್ ಗೌಡ

ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಖಂಡಿಸಿ ನವೆಂಬರ್ 11ರಂದು ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ಹಾಗೂ ಜನಾಕ್ರೋಶ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತದಿಂದ ರೈತರು, ಕಾರ್ಮಿಕರು, ಬಡವರು ಹಾಗೂ ಸಾಮಾನ್ಯ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆಯಿಂದ ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಬಡವರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದಲೂ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ದಿನಕ್ಕೆ ಕೇವಲ 3ರಿಂದ 4 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ರೈತರ ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಕೃಷಿ ಇಲಾಖೆಯಲ್ಲಿ ರೈತರಿಗೆ ದೊರೆಯಬೇಕಾದ ಸಬ್ಸಿಡಿ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ನಿರ್ಲಕ್ಷ್ಯದಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ದೂರಿದರು.

ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸದೆ ಹೊರರಾಜ್ಯದವರಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.

ಕಂದಾಯ ಇಲಾಖೆಯಲ್ಲಿನ ಅಸ್ತವ್ಯಸ್ತತೆ, ಸ್ಲಂ ನಿವಾಸಿಗಳು ಹಾಗೂ ಮೀನುಗಾರರಿಗೆ ಮೂಲಭೂತ ಸೌಲಭ್ಯಗಳ ಕೊರತೆ, ಹಿರಿಯ ರಾಜಕಾರಣಿಗಳ ಸ್ಟಿಂಗ್ ಆಪರೇಷನ್ ವಿಚಾರದಲ್ಲಿನ ಬೆಳವಣಿಗೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದೂ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

**ನಾಳೆ ಜನಾಕ್ರೋಶ ಮೆರವಣಿಗೆ**

ನವೆಂಬರ್ 11ರಂದು ಬೆಳಿಗ್ಗೆ 10.30ಕ್ಕೆ ನಗರದ ಹಳೆಯ ಬಸ್ ನಿಲ್ದಾಣ ರಸ್ತೆಯ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ ವೃತ್ತ ತಲುಪಲಿದೆ. ಬಳಿಕ ಮಧ್ಯಾಹ್ನ 12.30ರ ಸುಮಾರಿಗೆ ತಹಶೀಲ್ದಾರರಿಗೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಲಾಗುವುದು.

ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯಲ್ಲಿ ಕೈಜೋಡಿಸಬೇಕು ಎಂದು ಹರೀಶ್ ಗೌಡ ಮನವಿ ಮಾಡಿದರು.

ಈ ವೇಳೆ ತಾಲೂಕು ಜೆಡಿಎಸ್ ಉಪಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜು, ಮುಖಂಡರಾದ ಪ್ರವೀಣ್ ಶಾಂತಿನಗರ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ರೈತ ಮಹಿಳೆಯರ ಸ್ವಾವಲಂಬನೆಗೆ ಕ್ಷೀರ ಸಂಜೀವಿನಿ ಆಸರೆ- ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಮೂಲ್ ನಿರ್ದೇಶಕ…

11 hours ago

ಮೂರನೇ ಮದುವೆಗೂ ಗುಡ್‌ಬೈ ಹೇಳಿದ ಪವನ್ ಕಲ್ಯಾಣ್!

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಬದುಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪವನ್ ಕಲ್ಯಾಣ್ ಕೊನಿಡೆಲಾ…

12 hours ago

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

23 hours ago

ಹಾಲಿನ ಬೆಲೆ ಏರಿಕೆ ವಿರೋಧಿಸುವವರಿಗೆ ನೈತಿಕತೆ ಇಲ್ಲ-ರೈತಪರ ನಿರ್ಧಾರಕ್ಕೆ ರಾಜಕೀಯ ಬಣ್ಣ ಬೇಡ – ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…

1 day ago

ಸ್ಥಳೀಯ ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಚಿವ ಮುನಿಯಪ್ಪಗೆ ಮಾಜಿ ಶಾಸಕರ ನಿಯೋಗದಿಂದ ದೂರು

ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ…

1 day ago

ಹಂದಿ ಓಡಿಸಲು ಇಟ್ಟಿದ್ದ ಮದ್ದನ್ನು ಪಟಾಕಿ ಅಂತ ತಿಳಿದು ಬೆಂಕಿ ಹಚ್ಚಿದ ಬಾಲಕ – ತಲೆ ಛಿದ್ರಗೊಂಡು ಸಾವು.!!

ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…

1 day ago