ನಗರ ಮತ್ತು ತಾಲ್ಲೂಕಿನಾದ್ಯಂತ ಕೆಲವು ಖಾಸಗಿ ಶಾಲೆಗಳು ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ. ಆದರೂ ಅಧಿಕಾರಿಗಳ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಯ ಶುಲ್ಕವನ್ನು ನಿಯಂತ್ರಿಸುವ ಅಧಿಕಾರ ಇಲ್ಲವಾದಲ್ಲಿ ಲಿಖಿತ ರೂಪದಲ್ಲಿ ನೀಡಿ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್.
ತಾಲ್ಲೂಕಿನ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿ ಎಗ್ಗಿಲ್ಲದಂತೆ ವಸೂಲಿ ಮಾಡುತ್ತಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಡಿಡಿಪಿಐ ಶ್ರೀಕಂಠಯ್ಯ ಹಾಗೂ ಬಿಇಒ ರಂಗಪ್ಪ ಅವರೊಂದಿಗೆ ಕರವೇ ಕನ್ನಡಿಗರ ಬಣದ ವತಿಯಿಂದ ನಗರದ ಸರ್ಕಾರಿ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಖಾಸಗಿ ಶಾಲೆಗಳಲ್ಲಿ ಸರಕಾರದ ಮಾನದಂಡಗಳು ಅನುಸರಿಸಲಾಗುತ್ತಿದ್ದೇಯೆ? ಕೆಲ ಖಾಸಗಿ ಶಾಲೆಗಳಲ್ಲಿ ಕ್ರೀಡಾಂಗಣ ಇಲ್ಲ. ಮಕ್ಕಳನ್ನು ಕ್ರೀಡಾಂಗಣಕ್ಕೆ ಬೇರೆಡೆಗೆ ಕರೆದೊಯ್ಯುವ ಅವಶ್ಯಕತೆ ಇದೆ. ಕೆಲವು ಶಾಲೆಗಳು ಎಲ್ ಕೆಜಿಗೆ ಒಟ್ಟಿಗೆ ದುಡ್ಡುಕೊಟ್ಟರೆ ಎಸ್ಸೆಸ್ಸೆಲ್ಸಿ ವರೆಗೂ ಕಲಿಯಬಹುದು ಎಂದು ಹೇಳುತ್ತವೆ. ಆದರೆ ಮಧ್ಯದಲ್ಲಿ ಮಕ್ಕಳಿಗೆ ತೊಂದರೆಯಾದರೆ ಯಾರು ಹೊಣೆ. ಸದ್ಯ ಶಾಲೆಗಳಲ್ಲಿ ಸಮಸ್ಯೆಗಳ ಬಗ್ಗೆ ನಮಗೆ ತಿಳಿಯುವ ಮಾಹಿತಿ ಇಲಾಖೆಗೆ ಸಿಗುತ್ತಿಲ್ಲ ಯಾಕೆ. ಅಧಿಕಾರಿಗಳು
ಹೆಸರು ಉಳಿಯುವಂತ ಕೆಲಸ ಮಾಡಬೇಕು. ಆದಷ್ಟು ಬೇಗ ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಡಿಡಿಪಿಐ ಶ್ರೀಕಂಠಯ್ಯ ಮಾತನಾಡಿ, ಸರ್ಕಾರದ ಮಾನದಂಡಗಳನ್ನು ಪಾಲಿಸದ ಶಾಲೆಗಳ ಬಗ್ಗೆ ಕ್ರಮವಹಿಸಲಾಗುತ್ತದೆ. ಮಾನದಂಡವಿಲ್ಲದೆ
ಹಿಂದೆ ಅರಂಭವಾದ ಶಾಲೆಗಳ ಬಗ್ಗೆ ತಕ್ಷಣ ಮುಚ್ಚಲು ಸಾಧ್ಯವಿಲ್ಲ. ಅದಕ್ಕಾಗಿ ಆ ಶಾಲೆಗಳಿಗೆ ಸಭೆ ಕರೆದು ಸೂಚನೆ ನೀಡಲಾಗುತ್ತದೆ.
4 ತಾಲೂಕುಗಳ ಬಿಇಒಗಳ ಸಭೆ ನಡೆಸಲಾಗುತ್ತದೆ. ಇದರ ಬಗ್ಗೆ ಕ್ರಮವಹಿಸಲು ಸೂಚಿಸಲಾಗುತ್ತದೆ ಎಂದರು.
ಬಿಇಒ ರಂಗಪ್ಪ ಮಾತನಾಡಿ,
ಶಾಲೆಗಳಲ್ಲಿ ಇಷ್ಟೆ ಶುಲ್ಕ ಪಡೆಯಬೇಕು ಎಂದು ಸರ್ಕಾರದ ಯಾವುದೇ ಮಾನದಂಡವಿಲ್ಲ. ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುವ ಮಾಹಿತಿ ಬಂದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ.
ನಿಯಮಾನುಸಾರ ಇಲ್ಲದ ಶಾಲೆಗಳ ಸಭೆ ಕರೆದು ಅವರಿಗೆ ನೋಟಿಸ್ ನೀಡಿ ಕ್ರಮವಹಿಸಲಾಗುತ್ತದೆ.
ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುತ್ತದೆ ಎಂದರು.
ಈ ವೇಳೆ ಕನ್ನಡಿಗರ ಕರವೇ ರಾಜ್ಯ ಕಾರ್ಯದರ್ಶಿ ಆರ್ ರಮೇಶ್, ರಾಜ್ಯ ಖಜಾಂಚಿ ಚೇತನ್ ಗೌಡ, ತಾಲೂಕು ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ಕಾರ್ಮಿಕರ ಘಟಕದ ಮುಖಂಡರು ಹಾಜರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…