ಸರ್ಕಾರದ ಯೋಜನೆಗಳು ತ್ವರಿತವಾಗಿ ಜನರಿಗೆ ತಲುಪಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆ ಹಾಗೂ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಹಾಗೂ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭ ಮಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆಯಡಿ 2,31,009 ಫಲಾನುಭವಿಗಳಿದ್ದು ಅದರಲ್ಲಿ 1,70,329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 4,91,028 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,41,262 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ. ಉಳಿದಂತೆ ಇನ್ನೂ ನೋಂದಾಯಿಸಿಕೊಳ್ಳದ ಕುಟುಂಬಗಳಿಗೆ ಮಾಹಿತಿ ನೀಡಿ ಶೀಘ್ರ ನೋಂದಾಯಿಸುವಂತೆ ಕ್ರಮ ಕೈಗೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಜುಲೈ 20 ರಿಂದ ಜುಲೈ 24ರ ವರೆಗೆ 46903 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ,ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

ಪೋಡಿ, 11-ಇ ಸ್ಕೆಚ್, ಹದ್ದುಬಸ್ತು, ಮೋಜಣಿದಾರರ ಅಳತೆ ಪ್ರಕರಣಗಳ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸಿ ಸರ್ಕಾರಿ ಭೂಮಾಪಕರು ಹಾಗೂ ಖಾಸಗಿ ಭೂಮಾಪಕರ ಒಳಗೊಂಡಂತೆ ಶೀಘ್ರ ಕ್ರಮವಹಿಸಿ ನಿರ್ದಿಷ್ಟ ಕಾಲಮಿತಿಯೊಳಗೆ ಸರ್ವೆ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದರು.

ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಒಂದು ಘನತ್ಯಾಜ್ಯ ವಿಲೇವಾರಿ ಘಟಕವಿರಬೇಕು ಪ್ರತಿಯೊಂದು ಗ್ರಾಮದಲ್ಲೂ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳು ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರಲ್ಲದೆ ಈ ಇಲಾಖೆ ಅಡಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಸೂಕ್ತ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆ,ಕಾಲೇಜು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ , ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ. ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago