ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ

ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು  ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯಾವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತೂಬಗೆರೆ ಹೋಬಳಿಯ ಮೆಳೇಕೋಟೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

 ಸರ್ಕಾರ ನೀಡಿದ್ದ ಎಲ್ಲಾ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಹಾತ್ಮ ಗಾಂಧಿಯವರ ಕನಸು ರಾಮರಾಜ್ಯ ವಾಗಬೇಕೆಂಬುದನ್ನು ನಮ್ಮ ಸರ್ಕಾರ ಈಡೇರಿಸಿದೆ. ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆಯನ್ನು ಎದುರಿಸ ಬೇಕಾಗಿದ್ದು ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು‌.

ಪ್ರತಿಯೊಬ್ಬ ನಾಗರಿಕರಿಕನಿಗೂ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡಬೇಕು ಎಂದರು.

ನಂತರ ಕಾರ್ಯಕ್ರಮದಲ್ಲಿ ಮಹಿಳಾ  ಸ್ವಸಹಾಯ ಸಂಘಗಳಿಗೆ ಚೆಕ್ ಗಳನ್ನು ವಿತರಿಸಿದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮೆಳೇಕೋಟೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷೆ ಭಾಗ್ಯಮ್ಮ, ಹಾಡೋನಹಳ್ಳಿ ಗ್ರಾ.ಪಂ. ಎಚ್.ಎ.ನಾಗರಾಜ್, ತೂಬಗೆರೆ ಗ್ರಾ.ಪಂ ಅಧ್ಯಕ್ಷೆ ನಂಜಮ್ಮ, ಎಸ್.ಎಸ್.ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ಆಂಜಿನಮ್ಮ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಮೆಳೇಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಜಗನ್ನಾಥ, ಶಾಂತಕುಮಾರ್, ಎಸ್.ಆರ್.ಮುನಿರಾಜು, ಚಿನ್ನಪ್ಪ, ಚನ್ನಹಳ್ಳಿ ರಾಜಣ್ಣ, ಅರವಿಂದ್, ಮುನಿಕೃಷ್ಣಪ್ಪ, ಕಾಂತರಾಜು, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ಆರ್.ವಿ. ಮಹೇಶ್, ರಾಮಕೃಷ್ಣ, ಮಂಜುನಾಥ್, ಆಂಜಿನಪ್ಪ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *