ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯಾವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತೂಬಗೆರೆ ಹೋಬಳಿಯ ಮೆಳೇಕೋಟೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ನೀಡಿದ್ದ ಎಲ್ಲಾ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಹಾತ್ಮ ಗಾಂಧಿಯವರ ಕನಸು ರಾಮರಾಜ್ಯ ವಾಗಬೇಕೆಂಬುದನ್ನು ನಮ್ಮ ಸರ್ಕಾರ ಈಡೇರಿಸಿದೆ. ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆಯನ್ನು ಎದುರಿಸ ಬೇಕಾಗಿದ್ದು ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬ ನಾಗರಿಕರಿಕನಿಗೂ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡಬೇಕು ಎಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮೆಳೇಕೋಟೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷೆ ಭಾಗ್ಯಮ್ಮ, ಹಾಡೋನಹಳ್ಳಿ ಗ್ರಾ.ಪಂ. ಎಚ್.ಎ.ನಾಗರಾಜ್, ತೂಬಗೆರೆ ಗ್ರಾ.ಪಂ ಅಧ್ಯಕ್ಷೆ ನಂಜಮ್ಮ, ಎಸ್.ಎಸ್.ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ಆಂಜಿನಮ್ಮ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಮೆಳೇಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಜಗನ್ನಾಥ, ಶಾಂತಕುಮಾರ್, ಎಸ್.ಆರ್.ಮುನಿರಾಜು, ಚಿನ್ನಪ್ಪ, ಚನ್ನಹಳ್ಳಿ ರಾಜಣ್ಣ, ಅರವಿಂದ್, ಮುನಿಕೃಷ್ಣಪ್ಪ, ಕಾಂತರಾಜು, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ಆರ್.ವಿ. ಮಹೇಶ್, ರಾಮಕೃಷ್ಣ, ಮಂಜುನಾಥ್, ಆಂಜಿನಪ್ಪ ಇತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…