ಸರ್ಕಾರದ ಸಾಧನ ಸಮಾವೇಶ: ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ‌ ಸಿದ್ದರಾಮಯ್ಯ: ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು: ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದ ಜೊತೆಗೆ ಸರ್ಕಾರದ ಎರಡು ವರ್ಷದ ಸಾಧನ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಿಎಂ‌ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಡಾ. ಎಚ್.ಸಿ ಮಹಾದೇವಪ್ಪ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಜಮೀರ್ ಅಹ್ಮದ್ ಖಾನ್, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವರು ಕೃಷ್ಣ ಬೈರೇಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಎನ್.ಎಸ್ ಬೋಸರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *