Categories: ಕೋಲಾರ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನಕ್ಕೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ನಿರ್ಲಕ್ಷ್ಯ ಖಾಸಗಿ ಆಸ್ಪತ್ರೆಗಳ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ ಅದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆಯಾಗ ಬಾರದು ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಆರೋಗ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಜಗದೀಶ್ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೈನ್ಸ್ ಗಳನ್ನು ದೂರವಿಟ್ಟು ನಾಲ್ಕು ಸರ್ಕಾರಿ ಅಂಬುಲೈನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು ಹೊಸ ವಾಹನವನ್ನು ಕೊಡಿಸಲು ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಜಾರಿ ಮಾಡಿಸಲಾಗಿದೆ ನಮ್ಮ ಗಮನಕ್ಕೆ ಬರದೆ ಸ್ಥಳ ಪರಿಶೀಲಿಸಲು ಅಧಿಕಾರಿಗಳು ಬಂದಿದ್ದಾರೆ ಕಿಡಿಕಾರಿದರು

ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಲಿದೆ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ ಶಿಕ್ಷಣ ಆರೋಗ್ಯ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಶಿಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್, ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

15 minutes ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

10 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

10 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

13 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

17 hours ago