Categories: ವಿಜಯಪುರ

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಢವಳಾರ ಗ್ರಾಮದ ಮೈತ್ರಾ ಸುಂಗಠಾಣ(30) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರಿನಲ್ಲಿ ಹೆರಿಗೆಂದು ಮೊದಲು ಯಂಕಂಚಿ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ತೆರಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾಗ ವೈದ್ಯರಿಲ್ಲದೆ ಮೈತ್ರಾ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾಗಲೇ ಬಾಣಂತಿ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಅಧಿಕ ರ*ಕ್ತಸ್ರಾವವಾದಿಂದಾಗಿ, ವೈದ್ಯರಿಲ್ಲದೆ ನರ್ಸ್ ಗಳಿಂದ ಚಿಕಿತ್ಸೆ ನೀಡಿದ್ದಕ್ಕಾಗಿ, ಆಗ ತಾನೇ ಜನಿಸಿದ ಗಂಡು ಮಗು ಸಾ*ವನಪ್ಪಿದೆ.

ತಕ್ಷಣವೇ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಾಣಂತಿಯನ್ನು ಕರೆದುಕೊಂಡು ಹೋಗಲು ಸೂಚನೆ ನೀಡಿದ್ದಾರೆ. ಖಾಸಗಿ ಬಿಎಲ್ ಡಿಇ ಆಸ್ಪತ್ರೆಗೆ ರವಾನಿಸುತ್ತಿರುವಾಗಲೇ ದಾರಿ ಮದ್ಯೆಯೇ ಬಾಣಂತಿ ಸಾ*ವನಪ್ಪಿದ್ದಾರೆ. ಬಾಣಂತಿ ಹಾಗೂ ಹಸುಗೂಸು ಸಾ*ವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಕರ್ತವ್ಯದಲ್ಲಿ ವೈದ್ಯರು ಇದ್ದಿದ್ದರೆ ಎರಡು ಜೀವ ಉಳಿಸಬಹುದಿತ್ತು. ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ ಎಂದು ಆರೋಪ ಮಾಡಿದ್ದಾರೆ..

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

7 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

12 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

13 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

19 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

19 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago