ಸರ್ಕಾರಿ ಕೆಲಸ ಕಾರ್ಯ ಹಾಗೂ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು www.doddaballapura.com ವೆಬ್ ಸೈಟ್ ಜಾರಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ  ಕಚೇರಿಗಳಿಗೆ ಅಲೆದಾಡುವ ಕೆಲಸ ತಪ್ಪಿಸುವ ಸಲುವಾಗಿ ಶಾಸಕ ಧೀರಜ್ ಮುನಿರಾಜ್ ಅವರು www.doddaballapura.com ಎಂಬ ವೆಬ್ ಸೈಟ್ ನ್ನು ಜಾರಿಗೆ ತಂದಿದ್ದಾರೆ.

www.doddaballapura.com ಎಂಬ ವೆಬ್ ಸೈಟ್‌ ನಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ. ಈ ಮೂಲಕ ಕುಳಿತಲ್ಲೇ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು, ದೂರು‌ ಸಹ ದಾಖಲು ಮಾಡಬಹುದಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲೂಕಿನ ಜನತೆ ಈ ವೈಬ್ ಸೈಟ್‌ನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ ಅಥವಾ ಪಿ ಯು ಸಿ ಯಲ್ಲಿ ಶೇಕಡಾ 80ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ 1000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಕುರಿತು ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.

ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 80ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯು ಇಂದು ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ನಗರಸಭೆ ಅಧಕ್ಷೆ‌ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಬಮುಲ್ ನಿರ್ದೇಶಕರಾದ ಬಿ.ಸಿ.ಆನಂದ್, ಮುದ್ದಣ್ಣ, ನಾಗೇಶ್, ಟಿ. ರಂಗರಾಜು, ನಗರಸಭಾ ಸದಸ್ಯ ಬಂತಿ ವೆಂಕಟೇಶ್, ನಾಗರತ್ನಮ್ಮ, ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್, ಪುಷ್ಪ ಶಿವಶಂಕರ್, ವಾಣಿ ನಂದಕುಮಾರ್ ಸೇರಿದಂತೆ ಬಿಜೆಪಿ‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago