ದೊಡ್ಡಬಳ್ಳಾಪುರ: ತಾಲೂಕಿನ ಬೋಕಿಪುರದಲ್ಲಿ ಆಂಧ್ರ ಮೂಲದವರು ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮದ ರೈತರೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಇಕೋ ಫಾರ್ಮ್ ಹೌಸ್ ಎಂಬ ಸಂಸ್ಥೆಯಿಂದ ಜಮೀನು ಖರೀದಿ ಮಾಡಲಾಗಿತ್ತು. ಸರ್ವೆ ನಂಬರ್ 22 ರಲ್ಲಿ 1 ಎಕ್ಕರೆಗೂ ಹೆಚ್ಚು ಗೋಮಾಳಕ್ಕೆ ಕಾಂಪೌಂಡ್ ಹಾಕಿಕೊಳ್ಳಲು ಯತ್ನ ಮಾಡುತ್ತಿದ್ದಾರೆ. ಇದಕ್ಕೆ ಊರಿನ ಗ್ರಾಮಸ್ಥರು ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ವಿರೋಧ ವ್ಯಕ್ತಪಡಸಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲ್ಮಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಒತ್ತುವರಿ ಆಗಿರುವ ಅನುಮಾನ ಇರುವುದರಿಂದ ಸರ್ವೇ ಮಾಡಿಸಲು ಸೂಚನೆ ನೀಡಲಾಗಿದೆ.
ಸರ್ವೇ ಮಾಡಿಸುವವರೆಗೂ ಕಾಂಪೌಂಡ್ ನಿರ್ಮಾಣ ಮಾಡದಂತೆ ಕಂದಾಯ ಇಲಾಖೆ ಅಧಿಕಾರಿಗಳು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಕಾಂಪೌಂಡ್ ನಿರ್ಮಾಣಕ್ಕೆ ದೊಡ್ಡಬೆಳವಂಗಲ ಪೊಲೀಸರಿಂದ ತಡೆ ನೀಡಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…