ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಸಾಮಾನ್ಯ ಕನ್ನಡ ಪತ್ರಿಕೆ ಮರುಸೇರ್ಪಡೆಗೆ ಕನ್ನಡ ಪಕ್ಷ ಒತ್ತಾಯ

 

ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಮರುಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯ್ಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ ಹಾಗೂ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನಲ್ಲಿ ಪ್ರಕಟಿಸಿರುವ ಎಸ್‌ಡಿಎ ಮತ್ತು ಎಫ್‌ಡಿಎ ನೇಮಕಾತಿ ಅಧಿಸೂಚನೆಗಳಲ್ಲಿ ಈ ಹಿಂದಿನ ಪರೀಕ್ಷಾ ಮಾದರಿಯಲ್ಲಿದ್ದ 100 ಅಂಕಗಳ ಸಾಮಾನ್ಯ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಯಲ್ಲಿಯೂ ಸಾಮಾನ್ಯ ಕನ್ನಡ ಪತ್ರಿಕೆಯನ್ನು ಕೈಬಿಟ್ಟು ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಮಾತ್ರ ಉಳಿಸಿಕೊಂಡಿರುವುದು ಕನ್ನಡ ಭಾಷೆ ಹಾಗೂ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗಿದೆ. ಇದರಿಂದ ಗ್ರಾಮೀಣ ಭಾಗದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ ಅನುಭವಿಸುವ ಆತಂಕವಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ 100 ಅಂಕಗಳ ಸಾಮಾನ್ಯ ಕನ್ನಡ ಪತ್ರಿಕೆಯು ಅಭ್ಯರ್ಥಿಗಳ ಭಾಷಾ ಜ್ಞಾನ, ವ್ಯಾಕರಣ ಮತ್ತು ಆಡಳಿತಾತ್ಮಕವಾಗಿ ಕನ್ನಡ ಬಳಸುವ ಸಾಮರ್ಥ್ಯವನ್ನು ಅಳೆಯುವ ಪ್ರಮುಖ ಮಾನದಂಡವಾಗಿತ್ತು. ಆದರೆ, ಇದೀಗ ಈ ಪತ್ರಿಕೆಯನ್ನು ಕೈಬಿಟ್ಟಿರುವುದರಿಂದ ಆಡಳಿತ ಭಾಷೆಯಾಗಿ ಕನ್ನಡದ ಕಲಿಕೆ ಮತ್ತು ಬಳಕೆಗೆ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡವನ್ನು ಪದವಿ ಹಂತದಲ್ಲಿ ಪ್ರಮುಖ ವಿಷಯವಾಗಿ ಅಭ್ಯಾಸ ಮಾಡಿರುವ ಅಭ್ಯರ್ಥಿಗಳಿಗೆ ಸಾಮಾನ್ಯ ಕನ್ನಡ ಪತ್ರಿಕೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶ ಕಲ್ಪಿಸಿತ್ತು. ಈ ಪತ್ರಿಕೆಯನ್ನು ತೆಗೆದುಹಾಕುವುದರಿಂದ ಕನ್ನಡ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಲಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದಲ್ಲಿ ಕನ್ನಡ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಸಾಮಾನ್ಯ ಕನ್ನಡ ಪತ್ರಿಕೆ ಅನುಕೂಲಕರವಾಗಿತ್ತು. ಇದೀಗ ಅದನ್ನು ಕೈಬಿಟ್ಟಿರುವುದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಕಡತಗಳ ನಿರ್ವಹಣೆ, ಸಾರ್ವಜನಿಕರೊಂದಿಗೆ ಸಂವಹನ ಹಾಗೂ ಆಡಳಿತಾತ್ಮಕ ವ್ಯವಹಾರಗಳಲ್ಲಿ ಶುದ್ಧ ಮತ್ತು ವ್ಯಾವಹಾರಿಕ ಕನ್ನಡದ ಬಳಕೆ ಅತ್ಯಗತ್ಯವಾಗಿದೆ. ಕೇವಲ ಸಂವಹನ ಪತ್ರಿಕೆಯ ಮೂಲಕ ಅಭ್ಯರ್ಥಿಗಳ ಆಳವಾದ ಭಾಷಾ ಜ್ಞಾನ ಮತ್ತು ವ್ಯಾಕರಣದ ಅರಿವನ್ನು ಸಮರ್ಪಕವಾಗಿ ಪರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರಿ ಹುದ್ದೆಗಳಿಗೆ ಕನ್ನಡ ಭಾಷೆಯಲ್ಲಿ ಉತ್ತಮ ಜ್ಞಾನ ಹೊಂದಿರುವ ಅಭ್ಯರ್ಥಿಗಳ ಆಯ್ಕೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

100 ಅಂಕಗಳ ಕನ್ನಡ ಪತ್ರಿಕೆ ಕಡ್ಡಾಯಗೊಳಿಸಲು ಆಗ್ರಹ

ಮುಂಬರುವ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಕೇವಲ ಸಂವಹನ ಪತ್ರಿಕೆಗೆ ಸೀಮಿತವಾಗದೆ, ಹಿಂದಿನ ಪರೀಕ್ಷಾ ಮಾದರಿಯಂತೆ 100 ಅಂಕಗಳ ಸಾಮಾನ್ಯ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಕಡ್ಡಾಯವಾಗಿ ಮರುಸೇರ್ಪಡೆ ಮಾಡಬೇಕು. ಇಲ್ಲವೇ ಸಂವಹನ ಪತ್ರಿಕೆಯ ಜೊತೆಯಲ್ಲಿಯೇ ಪ್ರತ್ಯೇಕ ಸಾಮಾನ್ಯ ಕನ್ನಡ ಪತ್ರಿಕೆಯನ್ನು ಅಳವಡಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕನ್ನಡ ಭಾಷೆಯ ರಕ್ಷಣೆ, ಆಡಳಿತದಲ್ಲಿ ಕನ್ನಡದ ಸಮರ್ಪಕ ಅನುಷ್ಠಾನ ಹಾಗೂ ಗ್ರಾಮೀಣ ಅಭ್ಯರ್ಥಿಗಳ ಉದ್ಯೋಗಾವಕಾಶಗಳ ಹಿತದೃಷ್ಟಿಯಿಂದ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಕನ್ನಡ ನಾಡು, ನುಡಿಯ ಹಿತದೃಷ್ಟಿಯಿಂದ ಬೀದಿ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನೂ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಮುಖಂಡರಾದ ರಂಗಪ್ಪ, ಜಯರಾಮಣ್ಣ, ಬೋರೇಗೌಡ, ಚುಚ್ಚಪ್ಪ ಹಾಗೂ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅಗತ್ಯ: ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…

3 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಭಾಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಕರವೇ ಪಟ್ಟು

  ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…

5 hours ago

ಮರಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಕಾರು ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ದುರ್ಮರಣ: ನಾಲ್ವರಿಗೆ ಗಂಭೀರ ಗಾಯ

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…

10 hours ago

ಒಂಟಿ ಮನೆಗೆ ನುಗ್ಗಿ ದಂಪತಿಗೆ ಚಾಕು ತೋರಿಸಿ ದರೋಡೆ: ಚಿನ್ನಾಭರಣ, ನಗದು ದೋಚಿದ ಖದೀಮರು

ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ…

10 hours ago

ತಾಲೂಕಿನಲ್ಲಿ 250 ಕೋಟಿ ವೆಚ್ಚದ ಟೆಟ್ರಾಪ್ಯಾಕ್ ಘಟಕ ಸ್ಥಾಪನೆ: ಶೀಘ್ರದಲ್ಲೇ ಸಿಎಂ ಡಿ.ಕೆ.ಶಿ ಅವರಿಂದ ಶಂಕುಸ್ಥಾಪನೆ- ಬಮುಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…

1 day ago

ಬಿಲ್ಡಿಂಗ್ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕ ಕಟ್ಟಡದ ಮೇಲಿಂದ ಬಿದ್ದು ಸಾವು

ದೊಡ್ಡಬಳ್ಳಾಪುರ: ಬಿಲ್ಡಿಂಗ್‌ಗೆ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

1 day ago