Categories: ಕೋಲಾರ

ಸರ್ಕಾರಿ ನೌಕರರು ಕೆಂಪು, ಹಳದಿ ಬಣ್ಣದ ಟ್ಯಾಗ್ ಧರಿಸಲು ನಮ್ಮ ಕರ್ನಾಟಕ ಸೇನೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ ಹೊಸ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್‌ ಬಳಸುವಂತೆ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಂಗಳವಾರ ಉಪ ತಹಶಿಲ್ದಾರ್ ಹನ್ಸಾ ಮರಿಯ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪಾರೇಹೊಸಹಳ್ಳಿ ಎಂ.ನವೀನ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರದ ನೌಕರರು ತಮ್ಮ ಕೊರಳಲ್ಲಿ ಕರ್ನಾಟಕ ರಾಜ್ಯದ ಬಾವುಟದ ಹಳದಿ ಮತ್ತು ಕೆಂಪು ಬಣ್ಣದ ಟ್ಯಾಗ್‌ ಹಾಕುವುದು ಕಡ್ಡಾಯವಾಗಿದೆ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಅದನ್ನು ಪ್ರತಿಯೊಬ್ಬ ನೌಕರರು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಮೇಶ್ ಮಾತನಾಡಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತರು ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಧರಿಸಬೇಕು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮನಾಗಿದ್ದು ಇದೀಗ ಸರ್ಕಾರಿ ನೌಕರರ ಗುರುತಿನ ಟ್ಯಾಗ್‌ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್, ತಾಲೂಕು ಗೌರವ ಅಧ್ಯಕ್ಷ ರಮೇಶ್, ಅಧ್ಯಕ್ಷ ಮಂಜುನಾಥ್, ಮುಖಂಡರಾದ ಸುಗಟೂರು ಚಲಪತಿಗೌಡ, ನಂದೀಶ್, ಅನಿಲ್ ಕುಮಾರ್, ನಾಗರಾಜ್, ಅಂಜಿನಪ್ಪ, ಶ್ರೀನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

6 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

12 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago