ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ, ಸಂದೀಪ್ ಬಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಸಂದೀಪ್ ಅವರು ತಿಳಿಸಿದ್ದಾರೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ. ಸರ್ಕಾರದ ನಿರ್ಣಯಕ್ಕೆ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ ಸಹಮತ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…