Categories: ರಾಜ್ಯ

ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ

2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31 ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶ ಅನ್ವಯಿಸಲಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಅರೆಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

5 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

9 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

11 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

11 hours ago