Categories: ಕೋಲಾರ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಕುಮಾರ್ ನಾಮಪತ್ರ ಸಲ್ಲಿಕೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು

ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ
ಆಕಾಂಕ್ಷಿ ಅಜಯ್‍ಕುಮಾರ್, ತಾವು ಆಯ್ಕೆಯಾದರೆ ಸಂಘವನ್ನು ನೌಕರರ ಸ್ನೇಹಿಯಾಗಿ
ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಕೇಂದ್ರದ ನೌಕರರ ಭವನವನ್ನು ಈಗಾಗಲೇ ಕೆಡವಲಾಗಿದ್ದು, ಆಯ್ಕೆಯಾದ ಕೂಡಲೇ ಮೊದಲ
ಆದ್ಯತೆಯಾಗಿ ಸುಸಜ್ಜಿತ ನೌಕರರ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ
ರೂಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಿರಿಯರು ಒಂದೆಡೆ ಸೇರಿ ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿದರೆ ನಮ್ಮದೇನು ತಕರಾರಿಲ್ಲ. ಚುನಾವಣೆ ನಡೆದರೆ ನಾವು ಪ್ರಬಲವಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಶಾಸಕರಿಗೆ ಸಹಕಾರ ರತ್ನ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನಿಸಿದೆವು. ಅದೇ ಸಂದರ್ಭದಲ್ಲಿ ನಾವೂ ಪದಾಧಿಕಾರಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಮಗೂ ಅಭಿನಂದಿಸಿದ್ದು, ಯಾವುದೇ ಕಾರಣಕ್ಕೂ ಅವರು ಚುನಾವಣೆಯಲ್ಲಿ ತೊಡಗಿಸಿಕೊಂಡಿಲ್ಲ.
ಆದರೆ, ಅವಿರೋಧವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಯಾರೇ
ಅಧ್ಯಕ್ಷರಾದರೂ ರೈತರು, ಬಡವರಿಗೆ ಸಹಕಾರ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದರು.

ನೌಕರರ ಸಂಘದಲ್ಲಿ ಯಾವುದೇ ರೀತಿಯ ಗುಂಪುಗಾರಿಕೆಯಿಲ್ಲ. ಯಾವುದೇ ರೀತಿಯ
ಪ್ರಭಾವಗಳನ್ನು ಸಹ ಯಾರೂ ಹೇರುತ್ತಿಲ್ಲ. ಹಣ ಹಂಚಿಕೆ ಮಾಡುತ್ತಿರುವ ಬಗ್ಗೆಯೂ
ಮಾಹಿತಿಯಿಲ್ಲ. ಆದರೆ, ನಾವು ಪ್ರಾಮಾಣಿಕವಾಗಿ ಚುನಾವಣೆಯನ್ನು ನಡೆಸಿ ಗೆಲ್ಲುತ್ತೇವೆ
ಎಂದು ಅಜಯ್‍ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಲೂರು ತಾಲ್ಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್ ಚೌಡಪ್ಪ, ಮಾಜಿ‌ ಖಜಾಂಚಿ ವಿಜಯ್, ಮುಖಂಡರಾದ ಅನಿಲ್ ಕುಮಾರ್, ಅಪ್ಪೇಗೌಡ, ರಾಜೇಂದ್ರ ಸಿಂಗ್, ಮಂಜುನಾಥ್, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago