ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಯ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಬುಧವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ವಂದಿಸುವುದು ನೌಕರರ ಹಿತ ಕಾಪಾಡಲು ನೂತನ ಸಮಿತಿ ಕೆಲಸ ಮಾಡಲಿ ಜೊತೆಗೆ ಕಾರ್ಯಾಂಗ ಶಾಸಕಾಂಗ ಒಟ್ಟಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರಿಗೆ ಐದು ವರ್ಷದಿಂದ ಕಾದಿದ್ದ ಕತ್ತಲು ಇವತ್ತು ಬೆಳಕಾಗಿದೆ ಎಂಎಲ್ಎ ಕೊತ್ತೂರು ಮಂಜುನಾಥ್, ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡವಾಗಿ ಕೆಲಸ ಮಾಡಿದ್ದಕ್ಕೆ ನೌಕರರ ಜಯವಾಗಿದೆ ಮುಂದೆ ಆಡಳಿತದೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಮಾದರಿ ಜಿಲ್ಲೆ ಮಾಡೋಣ ಎಂದರು.
ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ಇವತ್ತಿನ ಗೆಲುವಿನೊಂದಿಗೆ ಜವಾಬ್ದಾರಿ ಹೆಚ್ಚಿದೆ ಹಿಂದೆ ಐದು ವರ್ಷದಲ್ಲಿ ಸರಿಯಾಗಿ ಸಭೆಗಳು ನಡೆದಿಲ್ಲ ಮುಂದೆ ಹಾಗೇ ನಡೆಯದ ರೀತಿಯಲ್ಲಿ ಶಾಸಕಾಂಗ ಕಾರ್ಯಾಂಗದ ಜೊತೆಗೆ ಹೋಗೋಣ ನೌಕರ ಭವನಕ್ಕೆ ಮೊದಲ ಸಭೆಯಲ್ಲಿ ತೀರ್ಮಾನ ಮಾಡೋಣ ಜೊತೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಹಂತ ಹಂತವಾಗಿ ಹೋಗೋಣ ಎಂದರು.
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸರ್ಕಾರಿ ನೌಕರರ ಸಂಘದ ನೂತನ ಖಜಾಂಚಿ ಮುರಳಿ ಮೋಹನ್, ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸರೆಡ್ಡಿ, ಮಾಲೂರು ತಾಲೂಕು ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಮಾಜಿ ಪದಾಧಿಕಾರಿಗಳಾದ, ಎಸ್. ಚೌಡಪ್ಪ, ವಿಜಯ್, ಕೆ.ಟಿ ನಾಗರಾಜ್ ಅಪ್ಪೇಗೌಡ, ಶಿವಕುಮಾರ್, ಎಂ ನಾಗರಾಜ್, ಅನಿಲ್ ಕುಮಾರ್, ಶ್ರೀರಾಮ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಮುಂತಾದವರು ಇದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…