ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸನ್ಮಾನ

ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಲಹೆ ನೀಡಿದರು.

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನ ಅಡ್ಡಗಲ್ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಸರ್ಕಾರಿ ನೌಕರರ ಸಂಘದ ಅಭಿನಂದನೆಗಳನ್ನ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಜನ ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವಂತೆ ಕರೆ ನೀಡಿದರು.

ನೂತನ ಸಂಘದ ಪದಾಧಿಕಾರಿಗಳು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಸಂಘದ ಅಭಿವೃದ್ದಿಯ ಜೊತೆಗೆ ಐದು ವರ್ಷಗಳ ಕಾಲ ಸಂಘವನ್ನ ಒಗ್ಗಟ್ಟಿನಿಂದ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.

ಸರ್ಕಾರಿ ನೌಕರರ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸುವ ಭರವಸೆಯನ್ನ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂತನ ಪದಾಧಿಕಾರಿಗಳಿಗೆ ವಾಗ್ದಾನ ಮಾಡಿದರು.

ನೂತನ ಅಧ್ಯಕ್ಷ ಅಜಯ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ನಿರ್ದೇಶಕರಾದ ಕೆ.ಎನ್ ಮಂಜುನಾಥ್, ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!