Categories: ಕೋಲಾರ

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಸಂಸದ ಮಲ್ಲೇಶ್ ಬಾಬುಗೆ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರತಿಯೊಂದು ಮನೆ ಬಾಗಿಲಿಗೆ ಮುಟ್ಟಿಸುವುದು ಕೆಲಸವನ್ನು ಅಧಿಕಾರಿ ವರ್ಗ ಮಾಡಿಕೊಂಡು ಬಂದಿದ್ದಾರೆ ಸರ್ಕಾರದ ಉದ್ದೇಶಕ್ಕೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ನೂತನವಾಗಿ ಆಯ್ಕೆಯಾಗಿರುವ ಸಮಿತಿಯು ನೌಕರಿ ಸ್ನೇಹಿಯಾಗಿ ಮುಂದಿನ ಐದು ವರ್ಷಗಳ ಕಾಲ ಕೆಲಸ ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯ ಸರ್ಕಾರಿ ನೌಕರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂಘವನ್ನು ನೌಕರರ ಸ್ನೇಹಿಯಾಗಿ ರೂಪಿಸಲಾಗುವುದು ಜಿಲ್ಲಾಕೇಂದ್ರದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಿ ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು ಇದಕ್ಕೆ ತಮ್ಮಗಳ ಸಹಕಾರವು ಅತಿ ಮುಖ್ಯವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು.

ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪದಾಧಿಕಾರಿಗಳಾದ ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ, ರಂಜಿತ್, ವರದರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

7 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

1 day ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago