ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ

 

ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳತನ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾದಗೊಂಡನಹಳ್ಳಿ ರಸ್ತೆಯ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯೋಗಾಲಯದಲ್ಲಿ ಓಡಾಡಿರುವ ದುಷ್ಕರ್ಮಿ ವಿದ್ಯುತ್ ವೈರ್ ಮಾತ್ರ ಕಳುವು ಮಾಡಿದ್ದಾನೆ.

ಪ್ರಯೋಗಾಲಯದ ಬೀಗ ಮುರಿಯಲು ಹೋಗಿರುವುದರಿಂದ ಬಾಗಿಲಿಗೆ ಹಾನಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ತಿಳಿಸಿದ್ದಾರೆ.

ಕಳತನ ನಡೆದಿರುವ ಘಟನೆ ಬಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಯ ವಿವರಗಳನ್ನು ಬರುವ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಕಾಲೇಜಿಗೆ ಭದ್ರತೆ ಸಮಸ್ಯೆ :

ದೊಡ್ಡಬಳ್ಳಾಪುರ ನಗರದಿಂದ ದೂರವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಭದ್ರತೆ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು  ಹೊಂದಿದೆ. ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣವಾಗಿಲ್ಲ. ಇದರಿಂದಾಗಿ ಸಂಜೆಯ ನಂತರ ಕುಡುಕರ ಹಾವಳಿ ಇರುತ್ತದೆ. ಕಾಲೇಜಿನ ಮೈದಾನದಲ್ಲಿ ಖಾಲಿ ಬಾಟಲ್ ನಿತ್ಯ ಕಾಣುತ್ತವೆ. ಕಾಲೇಜಿನ ಹೊರಭಾಗದಲ್ಲಿರುವ ವಿದ್ಯುತ್ ಲೈಟ್ ಮತ್ತು ಸಂಪರ್ಕಗಳನ್ನು ಹಾಳು ಮಾಡುತ್ತಿದ್ದಾರೆ.  ಕಾಲೇಜಿಗೆ ಖಾಯಂ ಡಿ ಗ್ರೂಫ್ ನೌಕರರು ಮತ್ತು ರಾತ್ರಿ ಕಾವಲುಗಾರ ಇಲ್ಲ ಎಂದು ಪೋಷಕರು ದೂರಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 hour ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago