ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿನ ಮಸ್ಟರಿಂಗ್ ಕೇಂದ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿದರು.

ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕೇಂದ್ರದಲ್ಲಿರುವ 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರ ಕಾರ್ಯಾಲಯದ ಸಭಾಂಗಣದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೆಶಿಸಿದರು.

ನಂತರ ಅಂಚೆ ಮೂಲಕ ಕಳುಹಿಸಲು ಸಿದ್ಧವಿರುವ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲನೆ‌ ನಡೆಸಿದರು.

ಈ ವೇಳೆ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ, ಡಿವೈಎಸ್ಪಿ ನಾಗರಾಜ್ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

18 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago