Categories: ಕೋಲಾರ

ಸರ್ಕಾರಿ ಬಸ್ ಸೇವೆ ಕಲ್ಪಿಸಕೊಡಬೇಕೆಂದು SFI ಒತ್ತಾಯ

ಮುಳಬಾಗಿಲು ತಾಲ್ಲೂಕಿನ ಯಳಚೇಪಲ್ಲಿ ಗ್ರಾಮಕ್ಕೆ ಹೋಗುತ್ತಿರುವ ಬಸ್ ಅನ್ನು ನಿಲ್ಲಿಸಿರುವುದು ವಿರೋಧಿಸಿ, ಈ ಕೂಡಲೇ ಸರ್ಕಾರಿ ಬಸ್ ಸೇವೆ ಕಲ್ಪಿಸಕೊಡಬೇಕೆಂದು ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.

ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮುಳಬಾಗಿಲು ತಾಲ್ಲೂಕು ಸಮಿತಿ ವತಿಯಿಂದ ಹಲವು ವರ್ಷಗಳಿಂದ ಸಮರ್ಪಕವಾಗಿ ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ಮುಳಬಾಗಿಲು ತಾಲ್ಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಸುಮಾರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಸರ್ಕಾರಿ ಬಸ್‌ಗಳ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಸರಿಯಾದ ಸಮಯ್ಯಕೆ ನಗರಕ್ಕೆ ಬರಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ತಾಯಲೂರು ವ್ಯಾಪ್ತಿಯಲ್ಲಿರುವ ಯಳಚೇಪಲ್ಲಿಗೆ ಕರೋನಾ ಸಮಯದ ಮುಂಚೆ ಬೆಳಿಗ್ಗೆ ಸಂಜೆ ಸರ್ಕಾರಿ ಬಸ್ ಸೌಲಭ್ಯವಿತ್ತು. ಆದರೆ, ಈಗ ಆ ಬಸ್ ಅನ್ನು ಕಳುಹಿಸುತ್ತಿಲ್ಲ, ವಿದ್ಯಾರ್ಥಿಗಳು ಸುಮಾರು 3-4 ಕಿ.ಮೀ. ನಡೆದುಕೊಂಡು ಬಂದು ಅಗರ ಗ್ರಾಮದ ಬಸ್ ತಂಗುದಾಣದಲ್ಲಿ ಬಸ್ ಹತ್ತುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಬೆಳಿಗ್ಗೆ ಮತ್ತು ಸಾಯಂಕಾಲ ಯಳಚೇಪಲ್ಲಿ ಗ್ರಾಮಕ್ಕೆ ಹಿಂದಿನಂತೆಯೇ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿಕೊಡಬೇಕು ಇಲ್ಲವೇ ತಾಲ್ಲೂಕು ಸರ್ಕಾರಿ ಬಸ್ ನಿಲ್ದಾನದಿಂದ ತಾಲ್ಲೂಕು ಕೆ ಎಸ್ ಆರ್ ಟಿ ಸಿ ಘಟಕದವರೆಗೂ ಬೃಹತ್ ಪಾದಯಾತ್ರೆಯ ಮೂಲಕ ಡಿಪೋ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ವ್ಯವಸ್ಥಾಪಕರು, ಮಧ್ಯಾಹ್ನದ ಬಸ್ ಸೌಲಭ್ಯವನ್ನು ಕಲ್ಪಿಸಿಕೊಡುತ್ತೇವೆ ಹಾಗೂ ಬೆಳಿಗ್ಗೆ 8 ಗಂಟೆಗೆ ಕಳುಹಿಸುವ ಬಸ್ ಅನ್ನು 1 ವಾರದ ಒಳಗೆ ಕಲ್ಪಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಅಧ್ಯಕ್ಷರಾದ ಅರ್ಚನಾ ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ತಾಲ್ಲೂಕು ಸಮಿತಿ ಸದಸ್ಯರಾದ ರಾಕೇಷ್ ಹಾಗೂ ನಾಗೇಷ್ ಮತ್ತು ಎಸ್ ಎಫ್ ಐ ಮುಖಂಡರು ಹಾಗೂ ಯಳಚೇಪಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

6 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

17 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago