ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.
ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.
ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.
ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…