ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶನ್ ಎಸ್ ಎಂ. ಎಂಬ ವಿದ್ಯಾರ್ಥಿ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ.ನಟರಾಜ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ ಪಿ.ವೈದ್ಯಾಧಿಕಾರಿ ದೀಪಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

30 minutes ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

10 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

21 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago