ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವ ಯೋಜನೆಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಇಂದು ದೇವನಹಳ್ಳಿಯಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವುದು. ದೇವನಹಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿ (ಮುನ್ನೋಟ) ಕುರಿತು ಕ್ರಿಯಾಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು.

ಆಶ್ರಯ ಯೋಜನೆಯಡಿ 4549 ನಿವೇಶನ ರಹಿತರನ್ನು  ಮತ್ತು 2555 ವಸತಿ ರಹಿತರನ್ನು ಗುರ್ತಿಸಿದ್ದು ಲಭ್ಯವಿರುವ ಜಮೀನುಗನುಗುಣವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಆಯೋಜಿಸಿ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆ, ಕುಂದು ಕೊರತೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ಬಗೆಹರಿಸುವುದು ಹಾಗೂ ಕ್ರಿಯಾಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಎಸ್.ಸಿ/ಎಸ್.ಟಿ ಹಾಗೂ ಇತರೆ ಎಲ್ಲಾ ಸಮುದಾಯದವರಿಗೆ  ಜಮೀನು ಲಭ್ಯತೆಗೆ ಅನುಗುಣವಾಗಿ ಸ್ಮಶಾನ ಭೂಮಿ  ಮಂಜೂರು ಮಾಡಿ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

 ದೇವನಹಳ್ಳಿ / ವಿಜಯಪುರ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಪ್ರತಿ ಬುಧವಾರ ಹಾಗೂ ತಿಂಗಳ ಮೊದಲ ಮತ್ತು ಮೂರನೆ ಶನಿವಾರ ತಾಲ್ಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸ್ಥಳೀಯ ಶಾಸಕರ ಕಚೇರಿ ದೂರವಾಣಿ ಸಂಖ್ಯೆಗೆ 080-22202099 ಕರೆಮಾಡಿ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಕೆರೆಗಳು ಹಾಗೂ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸಿ ತಾಣಗಳನ್ನಾಗಿ ಮಾಡಲು ಯೋಜನೆಗಳನ್ನು ರೂಪಿಸಲಾಗುವುದು. ಕೃಷಿ – ರೇಷ್ಮೆ ಹೈನುಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರೈತಾಪಿ ಕುಟುಂಬಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ತಮ್ಮ ಆದ್ಯತೆ ಎಂದು ಅವರು ತಿಳಿಸಿದರಲ್ಲದೆ ಈ ತಿಂಗಳ ಸೆಪ್ಟೆಂಬರ್ 25ನೇ ತಾರೀಖು ಜಿಲ್ಲಾ ಹಂತದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

32 minutes ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

3 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

6 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

18 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

18 hours ago