ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆ, ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರಲ್ಲದೆ ಲೋಕಾಯುಕ್ತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 400 ಪ್ರಕರಣಗಳಿದ್ದು, 150 ಪ್ರಕರಣಗಳನ್ನು ವಿಲೇವಾರಿಗೊಳಿಸಲಾಗುತ್ತದೆ. ಎಂದು ಮಾಹಿತಿ ನೀಡಿದರು.
ಸರ್ಕಾರಿ ಕೆಲಸಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಮಾಡದೆ ಇದ್ದಾಗ ಅಥವಾ ಕರ್ತವ್ಯ ಲೋಪ ಕಂಡುಬಂದರೆ ಜನರು ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಲೋಕಾಯುಕ್ತ ವೆಬ್‌ಸೈಟ್ ನಲ್ಲಿ ಸಿಗುವ ಅರ್ಜಿಯ ಫಾರ್ಮ್ಯಾಟ್ ಪಡೆದು ಕ್ರಮಬದ್ದವಾಗಿ ಅರ್ಜಿ ಸಲ್ಲಿಸಿದರೆ, ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಕ್ರಮವಹಿಸಲಾಗುತ್ತದೆ ಎಂದರು.
ಅಧಿಕಾರಿಗಳು ಸಾರ್ವಜನಿಕರ ಕೆಲಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಸಮಯಕ್ಕೆ ಸರಿಯಾಗಿ, ನಿಗದಿತ ಅವಧಿಯೊಳಗೆ ಕಾರ್ಯ ನಿರ್ವಹಿಸಬೇಕು. ಮಾಡಬಾರದಂತಹ ಕೆಲಸ ಮಾಡುವುದು. ಮಾಡುವಂತಹ ಕೆಲಸವನ್ನು ಸರಿಯಾದ ರೀತಿ, ಸಮಯದಲ್ಲಿ ಮಾಡದಿರುವುದು. ಮಾಡಲೇಬೇಕಾದ ಕೆಲಸವನ್ನು ಮಾಡದೇ ಇರುವುದರಿಂದ ಜನರ ಸಾಮಾಜಿಕ ಜೀವನದ ಮೇಲೆ ಸಮಸ್ಯೆ ಉಂಟುಮಾಡುತ್ತದೆ. ಇದರಿಂದಾಗಿ ಜನರು ಸಮಸ್ಯೆ ಬಗೆಹರಿಸಲು ಲೋಕಾಯುಕ್ತ ಸೇರಿದಂತೆ ನ್ಯಾಯಾಲಯಕ್ಕೆ ಅಲೆದಾಡುವಂತ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಅಧಿಕಾರಿಗಳು ಜನರ ಅರ್ಜಿಗಳನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ. ಸರ್ಕಾರಿ ಅಧಿಕಾರಿಗಳು ಜನರಿಗೆ ಯೋಜನೆಗಳನ್ನು, ಸೌಲಭ್ಯಗಳನ್ನು ಪ್ರಾಮಾಣಿಕ ಪ್ರಯತ್ನದಿಂದ ಪರಿಣಾಮಕಾರಿಯಾಗಿ ತಲುಪಿಸಬೇಕು. ರಸ್ತೆ, ಕೆರೆ, ಕುಂಟೆ, ಅರಣ್ಯ ಅಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳು ಜನರ ಅನುಕೂಲಕ್ಕಾಗಿ ಇರುವುದಾಗಿದೆ. ಅದನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಪ್ರತಿ ಶಾಸಕರು, ಅಧಿಕಾರಿಗಳು ಜಪ್ರತಿನಿಧಿಗಳು, ಜನರ ಸೇವಕರೇ ಆಗಿದ್ದಾರೆ. ಪ್ರಸ್ತುತ ಜನಸಂಖ್ಯೆಗೆ ಹೋಲಿಸಿದರೆ ಸರಕಾರಿ ನೌಕರರ ಸಂಖ್ಯೆ ಶೇಕಡಾ ಒಂದಕ್ಕಿಂತ ಕಡಿಮೆ ಇದೆ. ಜನರಿಗೆ ಸರಿಯಾದ ಸಮಯಕ್ಕೆ ಯೋಜನೆ ತಲುಪಬೇಕು. ಇದರಲ್ಲಿ ಏನಾದರೂ ಲೋಪಗಳು ಕಂಡುಬಂದರೆ ಅವರನ್ನು ಪ್ರಶ್ನಿಸಿ ಅವರಿಂದ ಸೂಕ್ತ ಉತ್ತರ ಬರದೆ ಇದ್ದಾಗ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದರು.
ಈ ವೇಳೆ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಅಹವಾಲು, ಕುಂದುಕೊರತೆ ಅರ್ಜಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಸಲ್ಲಿಸಿದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…