ಸರ್ಕಾರ ದ್ವೇಷ, ಟಾರ್ಗೆಟ್ ರಾಜಕಾರಣ ಮಾಡ್ತಿದೆ: ಇದು ಒಳ್ಳೆದಲ್ಲ- ಯುವ ಶಾಸಕನಿಗೆ ದ್ವೇಷದ ರಾಜಕಾರಣ ಮಾಡೋದು ಹೇಗೆ ಎಂದು ಕಾಂಗ್ರೆಸ್ ಕಲಿಸಿಕೊಡುತ್ತಿದೆ…- ಕಾಂಗ್ರೆಸ್ ವಿರುದ್ಧ ಶಾಸಕ ಧೀರಜ್ ಮುನಿರಾಜ್ ವಾಗ್ದಾಳಿ

ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ತಿರುಗೇಟು ಕೊಟ್ಟಿದ್ದಾರೆ.

ರವಿ ಅಣ್ಣ ಅಲ್ಲಿ ಆ ಮಾತು ಹೇಳಿದ್ದಾರೋ ಬಿಟ್ಟಿದ್ದಾರೋ ಅದನ್ನ ನ್ಯಾಯಾಂಗ ತನಿಖೆ ಮಾಡುತ್ತದೆ. ಅವರು ಅವಹೇಳನಕಾರಿ ಮಾತು ಆಡಿದ್ದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಲ್ಲ ಸುಳ್ಳು ಆಪಾದನೆ ಮಾಡಿರೋದಿಕ್ಕೆ ಇವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು.

ಒಂದು ಅವರ ಆರೋಪದ ಮಾತಿನಿಂದ ಅವರನ್ನ ಕಾನೂನಾತ್ಮಕವಾಗಿ ನಡೆಸಿಕೊಂಡರೇ..? ಅಲ್ಲಿ ಇದ್ದಂತಹ ಐಪಿಎಸ್ ಆಫಿಸರ್ ಗೆ ಗೊತ್ತಿಲ್ವಾ..? ಒಬ್ಬ ಎಂಎಲ್ಸಿನಾ ಜನ ಪ್ರತಿನಿಧಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಬೇಕು ಎಂದು..? ಏಕೆ ಅವರು ಬೆಳಗಾಂ ಕೋರ್ಟ್ ಗೆ ಕರೆದುಕೊಂಡು ಹೋದರು…? ಸಂಜೆ 5ರನಂತರ ಕೋರ್ಟ್ ಜಾಮೀನು ಕೊಡುದಿಲ್ಲ ಎಂದು ತೀರ್ಮಾನಿಸಿ ಮೂರು ದಿನ ಜೈಲಿನಲ್ಲಿ ಕೂರಿಸಿಬಿಡೋಣ ಎಂದು, ಬೆಂಗಳೂರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ, ಬೆಳಗಾವಿ ಸುತ್ತಾಮುತ್ತಾ ಸುಮಾರು 12ತಾಸು 480ಕಿಮೀ ಸುತ್ತಿ ಸಮಯ ವ್ಯರ್ಥ ಮಾಡಿದ್ದಾರೆ.. ಇದಕ್ಕೆ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶವ್ಯಕ್ತಪಡಿಸಲಾಗುತ್ತಿದೆ. ಘಟನೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ನಾನೊಬ್ಬ ಶಾಸಕ ನನ್ನ ಮೇಲೆ ಏಳು ಕೇಸ್ ಹಾಕ್ತಿರಾ. ಕಾಂಗ್ರೆಸ್ ನಾ ಎಂಎಲ್ಎ ಮಗ ಯುವ ಘಟಕದ ಅಧ್ಯಕ್ಷ ಅವನೊಬ್ಬ ರೌಡಿ ಶೀಟರ್ ಅವರ ಮೇಲೆ ಯಾವದೇ ಕೇಸ್ ಬೀಳೋದಿಲ್ಲ ಏಕೆ…? ಈ ಎಲ್ಲಾ ಬೆಳವಣಿಗೆಗಳನ್ನು ಜನ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದಾರೆ. ಇದಕ್ಕೆಲ್ಲಾ ಜನ ತಕ್ಕ ಪಾಠ ಕಲಿಸುತ್ತಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ಮಾಡಬಾರದೇ, ಪಿಎಸ್ಐ ಹಾಗೂ ಕೆಪಿಎಸ್ಸಿ ಪರೀಕ್ಷೆ ಒಂದೇ‌ ದಿನ‌ ನಡೆಸಿದರೆ ಉದ್ಯೋಗ‌ ಆಕಾಂಕ್ಷಿಗಳಿಗೆ ತೊಂದರೆ ಆಗೋದಿಲ್ಲವೇ ಇದರ ವಿರುದ್ಧ ಪ್ರತಿಭಟನೆ ಮಾಡಬಾರದೇ ಇದಕ್ಕೆ ನಮ್ಮ ಮೇಲೆ ಕೇಸ್ ಹಾಕ್ತೀರಾ ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಅಭಿವೃದ್ಧಿ‌ ಕಡೆ ಗಮನ ಹರಿಸಬೇಕೆ ಹೊರೆತು ಅಧಿಕಾರಕ್ಕಾಗಿ ದ್ವೇಷದ ರಾಜಕಾರಣ ಮಾಡಬಾರದು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಿದ್ಧಾಂತವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲರೂ ಕಲಿಯಬೇಕು ಎಂದು ಹೇಳಿದರು.

ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂದು ನನಗೆ ಅಂದರೆ 32 ವರ್ಷದ ಯುವ ಶಾಸಕನಾದ ನನಗೆ ಕಾಂಗ್ರೆಸ್ ಕಲಿಸಿಕೊಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

15 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

15 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

20 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago