ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂ.ಗೆ ಹೆಚ್ಚಿಸಬೇಕು- ರೈತ ಸಂಘ ಒತ್ತಾಯ

ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.

ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

37 minutes ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

2 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

12 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

12 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

14 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

16 hours ago