ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ ವಿನಯ್ ಗುರೂಜಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ವಿನಯ್ ಗುರೂಜಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ಸಮೃದ್ಧರಾಗಲಿ, ಬರಪೀಡಿತ ಪ್ರದೇಶಗಳಲ್ಲಿ ಮಳೆ ಸುರಿಯಲಿ ಎಂಬ ಸಂಕಲ್ಪದೊಂದಿಗೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದಿದ್ದೇವೆ. ಸುಬ್ರಹ್ಮಣ್ಯ ಎಂದರೆ ಶಕ್ತಿ. ಸ್ಕಂದನನ್ನು ಪ್ರಾರ್ಥಿಸಬೇಕು ಎಂಬ ಭಾವನೆ ಮೂಡಿದ ಕಾರಣ ಶರವಣ ಅವರೊಂದಿಗೆ ಈ ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ್ದೇವೆ. ರೈತರ ಸುಭಿಕ್ಷೆ ಹಾಗೂ ಲೋಕದ ಕಲ್ಯಾಣಕ್ಕಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ರೈತರನ್ನು ಕಡೆಗಣಿಸದೆ ಅವರೊಂದಿಗೆ ಕುಳಿತು ಮಾತುಕತೆ ನಡೆಸಬೇಕು. ಎಲ್ಲರ ಸಹಮತ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು. ಶಾಂತಿಯುತ ವಾತಾವರಣದಲ್ಲೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…