ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು- ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಕುಮಾರ್

ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಇಲಾಖೆಗಳಿಂದ ಪೂರ್ವಾನುಮತಿಯನ್ನು ಪಡೆಯಬೇಕು.‌ ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನಿನ ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಕುಮಾರ್ ಎಚ್ಚರಿಸಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ  ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಶಾಂತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಹಬ್ಬವನ್ನು ಶಾಂತಿ, ಸಂತೋಷವಾಗಿ ಆಚರಣೆ ಮಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಎಲ್ಲಾ ಧರ್ಮಗಳು ಶಾಂತಿ-ಸುವ್ಯವಸ್ಥೆ, ಅಹಿಂಸೆ, ಸಹಬಾಳ್ವೆ, ಸೌಹಾರ್ದ ಸೇರಿದಂತೆ ಒಳ್ಳೆ ಗುಣಗಳನ್ನು ಹೇಳುತ್ತವೆ. ಅಂತಹ ಒಳ್ಳೆ ಗುಣಗಳನ್ನು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಹೋದರೆ ನಮ್ಮ ಅಭಿವೃದ್ಧಿ ಜೊತೆಗೆ ಸಮಾಜನೂ ಅಭಿವೃದ್ಧಿ ಆಗುತ್ತದೆ ಎಂದರು.

ಯಾವುದೇ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡಬಾರದು. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಭಾವೈಕ್ಯ, ಸಹಭಾಳ್ವೆ ಸಾಧ್ಯ. ಹಾಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು, ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಅದನ್ನು ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರಲ್ಲದೆ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಈಗಾಗಲೇ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ ಎಂದು ತಿಳಿಸಿದರು.

ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.

ನಂತರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಮಾತನಾಡಿ, ಗಣೇಶ ಕೂರಿಸಲು ಅನುಮತಿ ಕಡ್ಡಾಯವಾಗಿರುತ್ತದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಜಾಗದಲ್ಲಿ ಗಣೇಶ ಕೂರಿಸುವಂತಿಲ್ಲ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಬಹಳ ಎಚ್ಚರಿಕೆಯಿಂದ ಇರಬೇಕು. ಗಣೇಶ ಕೂರಿಸಿರುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಿಕೊಳ್ಳಬೇಕು. ವಿದ್ಯುತ್ ಲೈನ್ ಗೆ ಎಟಕುವಂತೆ ಪೆಂಡಲ್, ಚಪ್ಪರ ಹಾಕಬಾರದು, ಜೊತೆಗೆ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಲೈನ್ ಇರುವುದನ್ನು ಪರಿಶೀಲಕೊಳ್ಳುತ್ತಿರಬೇಕು. ಹಬ್ಬವನ್ನು ಶಾಂತ ರೀತಿಯಿಂದ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago