Categories: ಕೋಲಾರ

ಸರ್ವೇ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಲಕ್ಷಾಂತರ ಅರ್ಜಿಗಳ ಮುಕ್ತಿಗೆ ರೈತ ಸಂಘದಿಂದ ಮನವಿ

ಕೋಲಾರ: ಜಿಲ್ಲಾದ್ಯಂತ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಸರ್ವೇ ಇಲಾಖೆ ಉಪ ನಿರ್ದೇಶಕ ಸಂಜಯ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಕೋಲಾರ ಜಿಲ್ಲೆಯ ಸರ್ವೇ ಇಲಾಖೆಗೆ ಅಧಿಕಾರಿಗಳು ಬರಬೇಕಾದರೆ ಭಯಬೀತರಾಗಿದ್ದಾರೆ. ಕಾರಣ ಗೊತ್ತಾಗುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳನ್ನು ವಿಲೇವಾರಿ ಮಾಡಿ 30 ದಿನಗಳೊಳಗೆ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಒತ್ತಾಯಿಸಿದರು.

ಇ-ಆಸ್ತಿ ಖಾತೆ ಬದಲಾವಣೆ ಆಸ್ತಿ ವರ್ಗಾವಣೆಗೆ ಸರ್ವೇಸ್ಕೆಚ್ ಕಡ್ಡಾಯವಾಗಿದೆ. ಸಕಾಲದಲ್ಲಿ ಸರ್ವೆಕಾರ್ಯ ನಡೆಯದ ಕಾರಣ ರೈತರಿಗೆ ಅಗತ್ಯ ದಾಖಲೆಗಳು ದೊರೆಯದಾಗಿವೆ. ಜೊತೆಗೆ ನಕ್ಷೆ ಹದ್ದುಬಸ್ತು ಗುರುತಿಸುವಿಕೆ ಜಮೀನು ಖರೀದಿ ಮಾರಾಟ ದಾನ ನೀಡಿಕೆ ಪೋಡಿ ಪ್ರಕ್ರಿಯೆ ಪ್ರಮಾಣ ಕಡಿಮೆಯಾಗಿದೆ. ಹಿಸ್ಸಾ ಪ್ರಕ್ರಿಯೆ ಹಕ್ಕು ಬದಲಾವಣೆಗೂ ತೊಂದರೆಗಳಾಗುತ್ತಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ರೈತರು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಸರ್ವೆಸ್ಕೆಚ್‌ಗೆ ಹೆಚ್ಚಿನ ರೈತರು ಅರ್ಜಿ ಸಲ್ಲಿಸಿದ್ದು, ಮೇಲ್ವಿಚಾರಕರ ಟೇಬಲ್‌ನಲ್ಲಿಯೇ ದೂಳು ಹಿಡಿಯುತ್ತಿದೆ. ಆರ್.ಟಿ.ಸಿ. ಹಾಗೂ ಪಿ ನಂಬರ್ ದುರಸ್ಥಿಗೆ ಸಾವಿರಾರು ರೈತರು ಅರ್ಜಿ ಸಲ್ಲಿಸಿ, ತಹಸೀಲ್ದಾರ್ ರವರ ಕಚೇರಿ ಬಳಿ ಜಾತಕ ಪಕ್ಷಗಳಂತೆ ಕಾದು ಸಾಕಾಗಿದೆ ಎಂದು ಅಧಿಕಾರಿಗಳ ವಿರುದ್ದ ಆರೋಪ ಮಾಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕೋಟಿ ಕೋಟಿ ಹಣದ ಆದಾಯ ಬರುವ ಪಿನಂಬರ್ ಮುಕ್ತಿಗೊಳಿಸಲು ರಾಜಕಾರಣಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ದಿಮೆಗಳ ಜಮೀನುಗಳನ್ನು ಸರ್ವೆ ಮಾಡಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದಿಲ್ಲ. ಆದರೆ ಬಡ ರೈತರು ಸಲ್ಲಿಸಿರುವ ಅರ್ಜಿ ವಿಲೇವಾರಿ ಮಾಡಲು ಸಿಬ್ಬಂದಿ ಕೊರತೆ ಹಾಗೂ ನಿಯಮದ ಪ್ರಕಾರ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾದ ಪರಿಸ್ಥಿತಿ ಇಲಾಖೆಯಲ್ಲಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬದಲಾವಣೆ ಆಗುತ್ತಿರುತ್ತಾರೆ. ಆದರೆ ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಪ್ರತಿಯೊಂದು ಸಮಸ್ಯೆಗೂ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿ ಇದೆ. ಅದರಲ್ಲಿ ಪ್ರಮುಖವಾಗಿ ರೈತರ ಒಡನಾಡಿಯಾಗಿರುವ ಸರ್ವೆ ಇಲಾಖೆಯಲ್ಲಿನ ಹತ್ತಾರು ವರ್ಷಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಇತ್ತೀಚೆಗೆ ಇಲಾಖೆಯಲ್ಲಿ ಸಿಬ್ಬಂದಿ ಖಾಲಿ ಇದೆ ಎಂಬ ನೆಪದಲ್ಲಿ ರೈತರು ಮತ್ತು ಜನ ಸಾಮಾನ್ಯರು ಕೃಷಿ ಹಾಗೂ ವಿವಿಧ ಆಸ್ತಿಗಳ ಹದ್ದುಬಸ್ತು ಬಿನ್ ಸೇತ್ಕೀ, ತಾತ್ಕಾಲಿ ಪೋಡಿ ಇ-ಸ್ವತ್ತು ಸೇರಿದಂತೆ ಜಮೀನು ಸರ್ವೆಗಾಗಿ ಸಾವಿರಾರು ಜನ ರೈತರು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದರೂ ಇದುವರೆಗೂ ಅರ್ಜಿ ವಿಲೇವರಿ ಆಗುತ್ತಿಲ್ಲ. ಅರ್ಜಿದಾರರು ಇಲಾಖೆಗೆ ಅಲೆದಾಡಿ ಸುಸ್ತಾಗಿ ಸರ್ವೇ ಇಲಾಖೆ ಜಿಲ್ಲೆಯ ಜನರ ಪಾಲಿಗೆ ಇಲ್ಲದಂತಾಗಿದೆ ಎಂದು ಇಡೀ ಶಾಪವಾಗುತ್ತಿದ್ದಾರೆ. ಅಧಿಕಾರಿಗಳ ವಿರುದ್ದ ಆಕ್ರೋಷ್ಯ ವ್ಯಕ್ತಪಡಿಸಿದರು.

ರೈತರು ಸರ್ವೆ ಇಲಾಖೆಗೆ ಸಲ್ಲಿಸುವ ಯಾವುದೇ ಅರ್ಜಿ 30 ದಿನಗಳಲ್ಲಿ ವಿಲೆವಾರಿಯಾಗಿ ಅರ್ಜಿಯ ಸಮಸ್ಯೆ ಇತ್ಯರ್ತವಾಗಬೇಕು. ಆದರೆ ಇಲಾಖೆಯಲ್ಲಿನ ಸಿಬ್ಬಂದಿ ಕೊರೆತೆಯಿಂದ ಇರುವ ಸಿಬ್ಬಂದಿಗೆ ಮಾನಸಿಕ ಹಾಗೂ ಕೆಲಸದ ಒತ್ತಡ ಮತ್ತು ಒತ್ತುವರಿಯಾಗಿರುವ ಸರ್ಕಾರಿ ಕೆರೆ, ರಾಜಕಾಲುವೆ, ಗುಂಡುತೋಪು, ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸಲು ಇರುವ ಸಿಬ್ಬಂದಿ ಸೀಮಿತವಾಗಿದ್ದಾರೆ. ಮತ್ತೊಂದಡೆ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ದಿ ಜಮೀನು ವಿವಾದಗಳು, ಸ್ಮಶಾನ ರಸ್ತೆಗಳ ಒತ್ತುವರಿ ತೆರವುಗೊಳಿಸಲು ಕೆಲವು ಸರ್ವೆ ಇಲಾಖೆ ಅಧಿಕಾರಿಗಳು ಸೀಮಿತವಾಗಿದೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ಸರ್ವೇ ಇಲಾಖೆ ಎಂಬುದು ರೈತರ ಹಾಗೂ ಜನ ಸಾಮಾನ್ಯರ ಪಾಲಿಗೆ ಇದ್ದು ಇಲ್ಲದಂತ ಇಲಾಖೆಯಾಗಿ ಮಾರ್ಪಟ್ಟಿದೆ ಕಂದಾಯ ಸಚಿವರು ಜಿಲ್ಲಾದ್ಯಂತ ಖಾಲಿ ಇರುವ ಸರ್ವೇ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಿ ಟೇಬಲ್‌ಗಳಲ್ಲಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ಕೊಡಿಸಿ ವರ್ಷಾನುಗಟ್ಟಲೆ ರೈತರು ಹಾಗೂ ಜನ ಸಾಮಾನ್ಯರು ಇಲಾಖೆಗೆ ಅಲೆದಾಡುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಮಾನ್ಯರಲ್ಲಿ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ನಿರ್ದೇಶಕ ಸಂಜಯ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ರೈತರ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಮ್ಮ ಮನವಿಯನ್ನು ತಲುಪಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಮನವಿ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಸುಪ್ರೀಂ ಚಲ, ಶಿವಾರೆಡ್ಡಿ, ಹರೀಶ್, ಯಲ್ಲಪ್ಪ ಇತರರಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

3 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

3 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

3 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

5 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago