ಸರ್ ಎಂ.ವಿ ಅವರ ಸಾಧನೆಯನ್ನ ಯುವಪೀಳಿಗೆ ಅರಿತರೆ ಬದುಕು ಪ್ರಜ್ವಲಿಸುತ್ತದೆ-ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ಸರ್.ಎಂ. ವಿ. ಅವರ ಬದುಕು ಮತ್ತು ಸಾಧನೆಯನ್ನು ಯುವ ಪೀಳಿಗೆ ಅರಿತಷ್ಟೂ ಬದುಕು ಪ್ರಜ್ವಲಿಸುತ್ತದೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಎಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ ಎಂ.ವಿ. ಕನ್ನಡ ಅಕಾಡೆಮಿ ಅಥವಾ ಇಂದಿನ ಕನ್ನಡ ಸಾಹಿತ್ಯ  ಪರಿಷತ್ತಿನ ಮೂಲ ಪ್ರೇರಕಶಕ್ತಿ ಹಾಗೂ ಕಾರಣಕರ್ತರು, ಆ  ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು  ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಅಗಾಧವಾದದ್ದು ಎಂದರು.

ವಿಶ್ವೇಶ್ವರಯ್ಯನವರು ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದರು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಾರಾಣಿ ಕಾಲೇಜು, ಹಲವಾರು  ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಸೌಲಭ್ಯಗಳು, ಮೈಸೂರು ವಿಶ್ವವಿದ್ಯಾಲಯ, ವಿವಿಧ ರೀತಿಯ ಕೈಗಾರಿಕೆಗಳು, ಸಾರ್ವಜನಿಕ ಗ್ರಂಥಾಲಯಗಳು ಇವೆಲ್ಲಾ ವಿಶ್ವೇಶ್ವರಯ್ಯನವರ ಸಮಗ್ರ ಕೊಡುಗೆಗಳು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ, ತಾರತಮ್ಯವನ್ನು ಹೋಗಲಾಡಿಸುವಲ್ಲಿ ಸಂವಿಧಾನ ಸಹಕಾರಿಯಾಗಿದೆ ಎಂದರು.

ಸಂವಿಧಾನ ಕೇವಲ ಭಾರತಕ್ಕೆ ಸೀಮಿತಗೊಳ್ಳದೆ ವಿಶ್ವದ ಹಲವು ದೇಶಗಳು ಸಂವಿಧಾನವನ್ನು ರೂಢಿಸಿಕೊಂಡಿವೆ, ಪ್ರಜೆಗಳಿಂದ, ಪ್ರಜೆಗಳಿಗಾಗಿ,ಪ್ರಜೆಗಳಿಗೋಸ್ಕರ ಇರುವ ಈ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಾವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯಲೇ ಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಪಿ.ಚೈತ್ರ, ಐ.ಐ.ಕ್ಯೂ.ಎ ಸಂಯೋಜಕರಾದ ದಿವ್ಯ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ, ಕಲ್ಪನಾ, ಕಿರಣ್, ಶೈಲಜ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 hour ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

12 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

16 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

24 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago