Categories: ಸಿನಿಮಾ

‘ಸಲಾರ್​’ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ರೆಸ್ಪಾನ್ಸ್: ಪ್ರಭಾಸ್ ನಟನೆಗೆ ಫುಲ್ ಫಿದಾ ಆದ ಫ್ಯಾನ್ಸ್: ಇಂದು ಐದು ಭಾಷೆಗಳಲ್ಲಿ ರಿಲೀಸ್

ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬಿನೇಷನ್​, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ‘ಸಲಾರ್’ ಚಿತ್ರ ದೇಶದಾದ್ಯಂತ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ, ಆರು ಸಾವಿರಕ್ಕೂ ಅಧಿಕ ಬೆಳ್ಳಿ ಪರದೆಗಳ ಮೇಲೆ ತೆರೆಕಂಡಿದೆ. ಚಿತ್ರವನ್ನು 270 ಕೋಟಿಯಲ್ಲಿ ನಿರ್ಮಾಣ ಮಾಡಲಾಗಿದೆ.

‘ಸಲಾರ್’ ಮೊದಲ ಶೋನಿಂದಲೇ ಚಿತ್ರಕ್ಕೆ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಚಿತ್ರವನ್ನು ನೋಡಲು ಸಾಲುಗಟ್ಟಿ ನಿಂತಿದ್ದಾರೆ.

ಇಬ್ಬರು ಬಾಲ್ಯ ಸ್ನೇಹಿತರ ಕಥೆಯನ್ನು ಸಿನಿಮಾದಲ್ಲಿ  ಹೇಳಲಾಗಿದೆ. ಸಿನಿಮಾದಲ್ಲಿ ಪ್ರಭಾಸ್ ಅವರು ದೇವ ಹೆಸರಿನಲ್ಲಿ​ ಕಾಣಿಸಿಕೊಳ್ಳುತ್ತಾರೆ. ಪೃಥ್ವಿರಾಜ್​ ರಾಜ ಮನ್ನಾರ್ ಆಗಿ ಅಭಿನಯಿಸಿದ್ದಾರೆ. ಸಿನಿಮಾವೆಲ್ಲ ಪ್ರಭಾಸ್​ ಮತ್ತು ಪೃಥ್ವಿರಾಜ್ ಮಧ್ಯೆ ಇದೆ. ಜೊತೆಗೆ ಕೆಲ ಘಟನೆಗಳಿಂದ ಇಬ್ಬರು ದೂರವಾಗಿ ಶತ್ರುಗಳಾಗುವುದನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಕಟ್ಟಿಕೊಟ್ಟಿದ್ದಾರೆ. ಇನ್ನು, ಸಲಾರ್​ ಸಿನಿಮಾ ನೋಡಿದ ಸಿನಿ ಪ್ರೇಮಿಗಳಂತು ಫುಲ್ ಫಿದಾ ಆಗಿದ್ದಾರೆ.

 

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕಣ: ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಹಣಾಹಣಿ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ…

19 hours ago

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ: 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತ ಪ್ರಶಾಂತ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಐತಿಹಾಸಿಕ ಜಂಬೂಸವಾರಿಗೆ ಶುಭ ಮೀನ ಲಗ್ನದಲ್ಲಿ…

1 day ago

ಪ್ರಕ್ಷ್ಯುಬ್ಧ ವಿಶ್ವ….

ಕೊರೋನಾ ಮಾರಿಯ ನಂತರದಲ್ಲಿ ವಿಶ್ವದ ಒಟ್ಟಾರೆ ಪರಿಸ್ಥಿತಿ ಪ್ರಕ್ಶುಬ್ಧವಾಗಿಯೇ ಮುಂದುವರಿದಿದೆ. ಕೋವಿಡ್ ನಿಂದಾದ ನಷ್ಟದಿಂದ ಆರ್ಥಿಕ ಚೇತರಿಕೆ ಕಂಡುಕೊಳ್ಳಬೇಕಾದ ಸಂದರ್ಭದಲ್ಲಿ…

2 days ago

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಬಿಷ್ಣೋಯ್ ಗ್ಯಾಂಗ್ ಹೊಣೆ?

  ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ…

4 days ago

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

4 days ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

5 days ago