ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಇಂದು ಲಿಖಿತ ಪರೀಕ್ಷೆ: ನಿಯಮ ಪಾಲನೆ ಕಡ್ಡಾಯ

ಬೆಂ.ಗ್ರಾ.ಜಿಲ್ಲೆ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಇಂದು (ಜ.28) ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಾಲಪ್ಪ ಕಾಲೇಜಿನಲ್ಲಿ ಎರಡು ಕೇಂದ್ರ, ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಒಂದು ಹಾಗೂ ಯಲಹಂಕದ ಬಿಎಂಎಸ್ ಕಾಲೇಜಿನ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಜಿಲ್ಲೆಯಲ್ಲಿ ಒಟ್ಟು 5000 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಲಿಖಿತ ಪರೀಕ್ಷೆಗೆ ಹಾಜಾರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ.ಪಿ ಅವರು ಸೂಚಿಸಿದ್ದಾರೆ.

ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ, ಕಾಲರ್ ರಹಿತ ಶರ್ಟ್‌ ಧರಿಸುವುದು. ಚಿಕ್ಕ ಪಾಕೇಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದ್ದಲ್ಲ, ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ ಧರಿಸಕೂಡದು.

ಪರೀಕ್ಷಾ ಕೇಂದ್ರಗಳಲ್ಲಿ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು, ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *