ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು: ಸುಸ್ಥಿರವಾಗಿದ್ದರೆ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ ಸಿಎಂ ಸಿದ್ದರಾಮಯ್ಯ

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೆ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಖಿಲ ಭಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಸರ್ಕಾರ ಒಂದು ವರ್ಷಕ್ಕೆ 1,200 ಕೋಟಿ ರೂ.ಗಳನ್ನು ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ  ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ 50 ಸಾವಿರದವರಗೆ ಸಂಪೂರ್ಣ ಸಾಲ ಮನ್ನಾ  ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು ಎಂದರು.

ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದೆ.  ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ 3 ಲಕ್ಷದವರೆಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈಗ ಅದನ್ನು ಬಡ್ಡಿ ರಹಿತವಾಗಿ 5 ಲಕ್ಷದವರೆಗೆ ನೀಡುವ ಕೆಲಸ ಮಾಡಲಾಗಿದೆ. ಶೇ 3 ರಷ್ಟು ಬಡ್ಡಿಯನ್ನು 15 ಲಕ್ಷ ಆಗುವವರೆಗೆ ಮಾತ್ರ ನೀಡಬೇಕು ಎಂದು ತಿಳಿಸಿದರು.

ಯಾವುದೇ ಬ್ಯಾಂಕಿನಲ್ಲಿ ಎಲ್ಲರೂ ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಅದು ಲಾಭದಾಯಕವಾಗಿ ನಡೆಯುತ್ತದೆ.  ಸ್ವಾರ್ಥ ಬಿಟ್ಟು ಸೇವೆ ಮಾಡುವ ಕ್ಷೇತ್ರವಿದು.  ಈ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ನಾಯಕತ್ವ ಬೆಳೆಸಿಕೊಳ್ಳುವ ಅವಕಾಶ ದೊರಯುತ್ತದೆ. ವಿಜಯಪುರ ಡಿಸಿಸಿ ಬ್ಯಾಂಕ್ ಪ್ರಾರಂಭವಾಗಿ 105 ವರ್ಷಗಳಾಗಿರುವ ಸ್ಮರಾಣಾರ್ಥ 15-16 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಿರುವುದರ ಅರ್ಥ ಬ್ಯಾಂಕು ಆರ್ಥಿಕವಾಗಿ ಸುಸ್ಥಿರವಾಗಿರುವುದರ ದ್ಯೋತಕವಾಗಿದೆ ಎಂದು ಹೇಳಿದರು.

ಸಹಕಾರಿ ತತ್ವದ ಮೇಲೆ ಜಾಗೃತಿ, ಸಮಾಜದಲ್ಲಿನ ಬಡತನ, ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಬೇಕು. ನಮ್ಮ ಸರ್ಕಾರ ಅಸಮಾನತೆ ತೊಲಗಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ 100 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಸಣ್ಣ ಪುಟ್ಟ ದೋಷಗಳ ಹೊರತಾಗಿಯೂ  ನೂರಕ್ಕೆ 90 ಭಾಗ ಬಡವರಿಗೆ, ಮಹಿಳೆಯರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಈ ಕಾರ್ಯಕ್ರಮ  ರೂಪಿಸಿ ಆರ್ಥಿಕ ಶಕ್ತಿಯನ್ನು ತುಂಬಲಾಗಿದೆ. ಸಹಕಾರ ಕ್ಷೇತ್ರ ಹೇಗೆ ಜಾತಿ ಧರ್ಮಗಳಿಂದ ಹೊರತಾಗಿದೆಯೋ ಅದೇ ರೀತಿ ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾರಿ ಧರ್ಮಗಳ ಜನರಿಗೆ, ಮೇಲ್ವರ್ಗದ ಬಡವರಿಗೂ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಎಂದರು.

12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದು ಡಿಸಿ, ಸಿಇಒ ಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.  ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ ಎಂದು ತಿಳಿಸಿದರು.

ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45,600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಲ್ಲಿ 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ  ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ ಎಂದು ಹೇಳಿದರು.

 ಸಹಕಾರಿ ರಂಗ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ರಂಗ ವ್ಯಾಪಿಸಿಕೊಂಡಿದೆ.  ಸಹಕಾರಿ ರಂಗದ ಅಭಿವೃದ್ಧಿ, ರಾಜ್ಯ ಮತ್ತು ದೇಶದ ಜಿಡಿಪಿಯ ಬೆಳವಣಿಗೆಯ ಮೇಲೂ ಪರಿಣಾಮವನ್ನು ಬೀರುತ್ತದೆ. ದೇಶದ ಆಂತರಿಕ ಕೊಡುಗೆಯ ಹೆಚ್ಚಳದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಅನೇಕ ಜಾತಿ ಧರ್ಮಗಳಿವೆ. ಆದರೆ ಸಹಕಾರಿ ರಂಗಕ್ಕೆ ಯಾವ ಜಾತಿ ಧರ್ಮಗಳ ಸೋಂಕು ಇಲ್ಲ. ಜಾತಿ ರಹಿತವಾದ ಧರ್ಮರಹಿತವಾದ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ ಎಂದರು.

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ. ನಮ್ಮ ಸರ್ಕಾರ ಹಾಲಿನ ಪ್ರತಿ ಲೀ.ಗೆ ರೂ. 5 ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗ ಪ್ರೋತ್ಸಾಹ ಧನವನ್ನು ಪ್ರತಿ ಲೀ.ಗೆ 5 ರೂ. ನಿಂದ ಹಿಡಿದು 8 ರೂ.ಗೆ ಹೆಚ್ಚಳ ಮಾಡಿ ನೀಡಲಾಗುತ್ತಿದ್ದು, ಈ ಮೊತ್ತ ರೈತರಿಗೆ ನೇರವಾಗಿ ತಲುಪುತ್ತಿದೆ ಎಂದಿದ್ದಾರೆ.

ಹಾಲು ಉತ್ಪಾದಕರ ಸಹಕಾರ ಸಂಘದವರು ಹಾಲು ಉತ್ಪಾದನೆ ಜಾಸ್ತಿಯಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಸಹಾಯ ಮಾಡಬೇಕೆಂಬ ಬೇಡಿಕೆಯನ್ನು ಸಲ್ಲಿಸಿತ್ತು. ಆದ್ದರಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಹಾಲು ನೀಡುವ ಯೋಜನೆಯನ್ನು ಹಮ್ಮಿಕೊಂಡು, ಹಾಲು ಉತ್ಪಾದಕರ ಸಮಸ್ಯೆ ಬಗೆಹರಿಸುವ ಜೊತೆಗೆ ಮಕ್ಕಳ ಪೌಷ್ಟಿಕತೆ ಹೆಚ್ಚಳಕ್ಕೂ ಅನುಕೂಲ ಕಲ್ಪಿಸಲಾಯಿತು ಎಂದು ಹೇಳಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago