ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.
ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.
ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…