ಸಹಕಾರ ರತ್ನ ಪ್ರಶಸ್ತಿ ಪಡೆದ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರಿಗೆ ಡಿ.19ರಂದು ತಾಲೂಕಿನ ಒಕ್ಕಲಿಗರ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಕುರುವೆಗೆರೆ ನರಸಿಂಹಯ್ಯ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಹಕಾರಿ ರತ್ನ ಚುಂಚೇಗೌಡ ಅಭಿಮಾನಿಗಳ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ 2022-23ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ತಾಲೂಕಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರು ಭಾಜನರಾಗಿರುವುದು ಸಂತಸದ ಸಂಗತಿ. ಈ ಹಿನ್ನೆಲೆ ಪಕ್ಷಾತೀತವಾಗಿ ಸನ್ಮಾನ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಎಂದರು.
ನಂತರ ಜಿ.ಲಕ್ಷ್ಮಿಪತಿ ಮಾತನಾಡಿ, ಡಿ.19ರ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ತಾಲೂಕು ಕಚೇರಿಯಿಂದ ಒಕ್ಕಲಿಗರ ಭವನದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಚುಂಚೇಗೌಡ ಅಭಿಮಾನಿಗಳು ಭಾಗವಹಿಸಬೇಕಾಗಿದೆ ಎಂದು ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು, ರಾಮಕೃಷ್ಣ, ಭೈರೇಗೌಡ, ಅಪ್ಪಿ ವೆಂಕಟೇಶ್, ರಾಜಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…