ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.
ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.
ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…