ಸಹೋದರರಿಗೆ ರಾಖಿ ಕಟ್ಟಿ ಸಾವನ್ನಪ್ಪಿದ ಸಹೋದರಿ..!

ಇಂದು ನಾಡಿನೆಲ್ಲೆಡೆ ರಕ್ಷಾ ಬಂಧನ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು. ಈ ದಿನದಂದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದರಿಂದ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಆದರೆ, ಸಹೋದರರಿಗೆ ರಾಖಿ‌ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಸಹೋದರಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಕೆಲ ಪುಂಡರ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದಳು. ಸಾಯುತ್ತೇನೆಂದು ತಿಳಿದು ತನ್ನ ಸಹೋದರರಗೆ ಕೊನೆಯ ಬಾರಿಗೆ ರಾಖಿ ಕಟ್ಟಿದಳು..ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

ತೆಲಂಗಾಣದ ಮಹಬೂಬಾಬಾದ್‌ನಲ್ಲಿರುವ ಆಸ್ಪತ್ರೆಯಲ್ಲಿಂದು ನಡೆದಿದೆ.

ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಯುವತಿಗೆ ಒತ್ತಾಯಿಸಿ 17 ವರ್ಷದ ಯುವಕನೋರ್ವ ಕಿರುಕುಳ ನೀಡುತ್ತಿದ್ದ. ಯುವಕನ‌ ಕಿರುಕುಳ ತಾಳಲಾರದೆ ಬಾಲಕಿ ಶನಿವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬಾಲಕಿ ಕೊಡಾಡ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದಳು, ಅಲ್ಲಿ ಒಬ್ಬ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಆತನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳು. ಈ ಹಿನ್ನೆಲೆ ಆ ಯುವಕ ತನ್ನ ಕೆಲವು ಸ್ನೇಹಿತರ ಜೊತೆಗೂಡಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ಪುಂಡರ ಗುಂಪಿನಿಂದ ಕಿರುಕುಳವನ್ನು ಸಹಿಸಲಾಗದ ಆಕೆ ತನ್ನ ಜೀವನವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ವಿಷ ಸೇವಿಸಿದ್ದಾಳೆ.

ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

3 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

4 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

18 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

19 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago