ಸಾಂಕೇತಿಕವಾಗಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ಕೋಲಾರ: ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡಿ ಸಂಕೇತಿಕವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು,

ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯದ ಮುಖಂಡರು, ಜಿಲ್ಲಾಡಳಿತದ ನೇತೃತ್ವದಲ್ಲಿ ಅ.17 ರಂದು ಗುರುವಾರ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಅದ್ದೂರಿಯಾಗಿ ಸಮಾರಂಭವನ್ನು ಏರ್ಪಡಿಸಿದ್ದು ಇವತ್ತು ಸಾಂಕೇತಿಕವಾಗಿ ಪೂಜೆ ನೆರವೇರಿಸಿದ್ದು ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲೆಯ ಆರು ತಾಲ್ಲೂಕುಗಳಿಂದ ವಾಲ್ಮೀಕಿ ನಾಯಕ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರಾದ ನಗರಸಭೆ ಸದಸ್ಯ ಎನ್.ಅಂಬರೀಷ್, ಎಂ.ಬಾಲಗೋವಿಂದ್, ಟಿ.ವಿಜಯಕುಮಾರ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ನರೇಶ್, ಬೈರಂಡಹಳ್ಳಿ ನಾಗೇಶ್, ಮುಂತಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!