ಸಾಂತ್ವನ ಯೋಜನೆಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೇಂದ್ರಗಳ ಮೇಲ್ವಿಚಾರಣಾ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಸಮಿತಿ, ಬಾಲಭವನ ಸೊಸೈಟಿ ಸಮಿತಿ, ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಸಮಿತಿಗಳ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ನೆರವು ತಾತ್ಕಾಲಿಕ ಆಶ್ರಯ ರಕ್ಷಣೆ ನೀಡುವುದರ ಜೊತೆಗೆ ಸ್ವಯಂ ಪ್ರೇರಣೆಯಿಂದ ಜೀವಿಸಲು ಅನುಕೂಲವಾಗುವಂತೆ ತರಬೇತಿ ನೀಡಬೇಕು. ಅಂತಹ ಮಹಿಳೆಯರಿಗೆ ಸಮಾಜದಲ್ಲಿ ಇತರ ಮಹಿಳೆಯರಂತೆ ಧೈರ್ಯವಾಗಿ ಬದುಕಲು, ಸಶಕ್ತರನ್ನಾಗಿ ಮಾಡಲು ಸಾಂತ್ವನ ಯೋಜನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದರು.
ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದರ ಜೊತೆಗೆ ಸಾಗಾಣೆಗೆ ಒಳಗಾದವರ, ಶೋಷಣೆಗೆ ಒಳಗಾದವರ ರಕ್ಷಣೆ, ಪುನರ್ವಸತಿ, ಕುಟುಂಬಗಳೊಡನೆ ಪುನಃ ವಿಲೀನಗೊಳಿಸುವ ಸಲುವಾಗಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿ ದಾಖಲಾಗಿರುವ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸಿ, ಮರಳಿ ಮನೆಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.
ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜಿಲ್ಲೆಯಲ್ಲಿ 2023 ರ ಏಪ್ರಿಲ್ ರಿಂದ ಜೂನ್ ವರೆಗೆ 14 ಪ್ರಕರಣ ದಾಖಲಾಗಿದ್ದು 01 ಪ್ರಕರಣ ಇತ್ಯರ್ಥವಾಗಿದ್ದು, 13 ಪ್ರಕರಣಗಳಿಗೆ ಎಫ್.ಐ.ಆರ್ ದಾಖಲಾಗಿ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಇದರ ಬಗ್ಗೆ ವರದಿ ಅನುಸರಿಸಿ ಮಾಹಿತಿ ನೀಡಿ ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…