ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.
ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.
ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.
ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).
ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599, ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…